1. ಸುದ್ದಿಗಳು

ಸಿಹಿ ಸುದ್ದಿ: ಪುಣ್ಯಕೋಟಿ ದತ್ತು ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ!

Kalmesh T
Kalmesh T
Good news: CM Bommayee launches Punyakoti adoption project!

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರ ಜನ್ಮದಿನದ ಪ್ರಯುಕ್ತ “ಪುಣ್ಯಕೋಟಿ ದತ್ತು ಯೋಜನೆ” ಕಾರ್ಯಕ್ರಮವನ್ನು ಆರಂಭಿಸಲಾಯಿತು.

ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು ರೂ.11,000 ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಯಿತು.

ಇದನ್ನೂ ಓದಿರಿ: 

Bengaluru: ತಲೆ ಎತ್ತಲಿದೆ 85 ಕೋಟಿಯ ಕೆಂಪೆಗೌಡರ ಪ್ರತಿಮೆ: ದೆಹಲಿಯಿಂದ ಬೆಂಗಳೂರಿಗೆ 4 ಸಾವಿರ ಕೆ.ಜಿ ತೂಕದ ಖಡ್ಗ!

ಹಾವೇರಿಯಲ್ಲಿ “ಮೀನು ಹಬ್ಬ” ಆರಂಭ: ವಿಶೇಷ ಆಚರಣೆಯ ಬಗ್ಗೆ ನಿಮಗೆ ಗೊತ್ತೆ! ಇಲ್ಲಿದೆ ಕಂಪ್ಲಿಟ್ ಮಾಹಿತಿ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದ ಮುಖ್ಯಮತ್ರಿ ಬೊಮ್ಮಾಯಿಯವರು, ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ಹೋಗಿ ಮಕ್ಕಳೊಂದಿಗೆ ಆಚರಿಸಿಕೊಳ್ಳುತ್ತಿದ್ದೆ.

ಆದರೆ ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿರುವುದನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು.

ರಾಜ್ಯದಲ್ಲಿ ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಸಿಎಂ ಹೇಳಿದರು.

FaceBook: ನೀವು ಫೇಸಬುಕ್ ಬಳಸುತ್ತಿದ್ದರೇ ಹುಷಾರ್! ನಿಮ್ಮ ಖಾತೆ ಹ್ಯಾಕ್ ಆಗಿರಬಹುದು

ಜೀವನಕ್ಕೆ ಆಧಾರವಾಗಿರುವ ಗೋವು ಸಾಕಾಣಿಕೆ

ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಗೋಹತ್ಯೆ ತಡೆ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೇ ಇಲ್ಲ.

ಗೋ ಸಂಪತ್ತನ್ನು ಉಳಿಸಿಕೊಂಡರೆ ಆಹಾರ, ಆದಾಯ, ಪೌಷ್ಟಿಕತೆಯನ್ನು ನೀಡುತ್ತದೆ. ಇಂತಹ ಗೋವುಗಳು ವಯಸ್ಸಾದ ನಂತರ ಕೊಲ್ಲುವದು ತಪ್ಪು. ನಮ್ಮ ದೇಶದ ಸಂಸ್ಕೃತಿ, ಜೀವ ಉಳಿಸುವುದೇ ಹೊರತು ತೆಗೆಯುವುದಲ್ಲ ಎಂದರು.

Shocking news: ಮತ್ತೆ LPG ಸಿಲಿಂಡರ್ ಬೆಲೆಯಲ್ಲಿ 50 ರೂ ಹೆಚ್ಚಳ!

ಎಚ್ಚರಿಕೆ! “ವಾಹನ ಚಾಲಕರಿಗೆ ಎಚ್ಚರಿಕೆ” ಡ್ರೈವಿಂಗ್ ವೇಳೆ ಗುಟ್ಕಾ ಜಗಿದರೆ ಬೀಳತ್ತೆ ದಂಡ!

ಮನೆಬಾಗಿಲಿಗೆ ತೆರಳಿ ದನಕರುಗಳಿಗೆ ಚಿಕಿತ್ಸೆ

ಗೋ ಸಂಪತ್ತಿನ ರಕ್ಷಣೆಗಾಗಿ 100 ಗೋಶಾಲೆಗಳನ್ನು ಪ್ರಾರಂಭ ಮಾಡಲಾಗುವುದು. ಗೋ ಉತ್ಪನ್ನಗಳ ಮಾರಾಟಕ್ಕಾಗಿ “ಗೋ ಮಾತಾ ಸಹಕಾರ ಸಂಘ”ವನ್ನು ಸ್ಥಾಪಿಸಲಾಗುವುದು. ಔಷಧಿ ವ್ಯವಸ್ಥೆ, 400 ಪಶುವೈದ್ಯರ ನೇಮಕಾತಿ, ಡಿಪ್ಲೊಮಾ ಮಾಡಿದ ವಿದ್ಯಾರ್ಥಿಗಳಿಗಾಗಿ 250 ಹುದ್ದೆ ಭರ್ತಿಗೊಳಿಸಿ ಗೋ ಸೇವೆ, ಪಶುಸೇವೆಗೆ ಅವಕಾಶ ಕಲ್ಪಿಸಲಾಗುವುದು.

ರೋಗಗ್ರಸ್ತ ದನಕರುಗಳ ಚಿಕಿತ್ಸೆಗೆ ಅನುಕೂಲವಾಗುವಂತಹ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗಿದ್ದು, ದನಕರುಗಳಿಗೆ ಮನೆಬಾಗಿಲಿಗೆ ತೆರಳಿ ಚಿಕಿತ್ಸೆ ಕೊಡಿಸುವಂತಹ ಮಾನವೀಯ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಪ್ರಾರಂಭಿಸಿರುವುದು ಅಭಿನಂದನೀಯ ಎಂದರು.

ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ

ನಂದಿನ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕನ್ನು ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲಾಗುತ್ತಿದೆ. 3600 ಕೋಟಿ ರೂ.ಗಳ ಬಂಡವಾಳದಿಂದ ಹಾಲು ಉತ್ಪಾದಿಸುವ ರೈತರಿಗೆ ಸುಲಭ ದರದಲ್ಲಿ ಸಾಲ ನೀಡುವ ಮೂಲಕ ಆರ್ಥಿಕ ಅಭಿವೃದ್ದಿಗೊಳಿಸಲಾಗುವುದು.

ರಾಜ್ಯದಲ್ಲಿ ಕ್ಷೀರ ಆರ್ಥಿಕ ಕ್ರಾಂತಿ ಆಗಲಿದೆ. ಗೋವುಗಳ ವಿವಿಧ ತಳಿಗಳ ಅಭಿವೃದ್ಧಿ, ಹಾಲು ಮೆಗಾ ಡೈರಿ ಸ್ಥಾಪನೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಮಾಡಿ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿದೆ.

ರೈತರ, ಶ್ರಮಿಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಲು ಸರ್ಕಾರ ಬದ್ಧವಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಸಹಕಾರ, ಪಶುಸಂಗೋಪನೆ ಇಲಾಖೆಗಳನ್ನು ಸಂಯೋಜನೆಗೊಳಿಸುವ ಮೂಲಕ ಮಾಹತ್ಮಾಗಾಂಧಿಯವರ ಗ್ರಾಮಾಭಿವೃದ್ಧಿಯ ಕನಸನ್ನು ಸಾಕಾರಗೊಳಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಪ್ರೇರಣಾಶಕ್ತಿಯಾಗಿರುವ ಗೋಮಾತೆಯ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಹೇಳಿದರು.

ಪೈಲ್ವಾನ್ ಕಿಚ್ಚ ಸುದೀಪ್ ಕೊಟ್ಟ ಗುನ್ನಾಕೆ ಮಕಾಡೆ ಮಲಗಿದ ಅಜಯ್ ದೇವಗನ್!

Published On: 08 May 2022, 02:29 PM English Summary: Good news: CM Bommayee launches Punyakoti adoption project!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.