News

ನಾಡದೋಣಿ ಮೀನುಗಾರರಿಗೆ ಸಿಹಿಸುದ್ದಿ: ಹೆಚ್ಚುವರಿ 30 ಲಕ್ಷ ಲೀ. ಸೀಮೆಎಣ್ಣೆ ಬಿಡುಗಡೆಗೆ ಕೇಂದ್ರ ಸಮ್ಮತಿ

03 November, 2022 12:22 PM IST By: Hitesh
kerosene

ಕೇಂದ್ರ ಸರ್ಕಾರವು ರಾಜ್ಯದ ಕರಾವಳಿ ಪ್ರದೇಶದ ಮೀನುಗಾರರ ಮನವಿಗೆ ಸ್ಪಂದಿಸಿದೆ.

ಪಂಜಾಬ್‌ನಲ್ಲಿ ಕಳೆ ಸುಡುತ್ತಿರುವ ರೈತರು; ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ! 

ಕೇಂದ್ರ ಸರ್ಕಾರವು ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.   

ಮೀನುಗಾರರಿಗೆ ಸಹಕಾರ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಲ್ಲಿಯವೆರೆಗೆ ಸಾಂಪ್ರದಾಯಿಕವಾಗಿ ನಡೆಯತ್ತಿರುವ ನಾಡದೋಣಿ ಚಲಾಯಿಸುವ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆಎಣ್ಣೆ ಸಮರ್ಪಕವಾಗಿ ಲಭ್ಯವಾಗುತ್ತಿರಲಿಲ್ಲ.

ಈ ಸಮಸ್ಯೆಯನ್ನು ಬಗೆಹರಿಸುವಂತೆ ಮೀನುಗಾರರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಮೀನುಗಾರರಿಗೆ ಹಂಚಿಕೆಯಾಗಿರುವ ಸೀಮೆಎಣ್ಣೆಯನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು.

ಈ ಮೂಲಕ ಕರಾವಳಿಯ ಮೀನುಗಾರರ ನೆರವಿಗೆ ಬರಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟದ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಸಲ್ಲಿಸಲಾಗಿತ್ತು.  

ಕರಾವಳಿಯ ಮೀನುಗಾರರಿಗೆ ಸಕಾಲದಲ್ಲಿ ಸೀಮೆಎಣ್ಣೆ ಸಿಗದೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದಿದ್ದರು.  

ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ,

ಕರಾವಳಿಯ ಮೀನುಗಾರರ ಹಿತ ಕಾಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು.

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಸುಧಾರಣೆ: 8 ಲಕ್ಷ ವಿದ್ಯಾರ್ಥಿಗಳು ದಾಖಲು! 

ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿ ಪರಿಗಣಿಸಿರುವ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಬುಧವಾರ ಕರ್ನಾಟಕ ಸರ್ಕಾರಕ್ಕೆ 2022-23ನೇ ಪಾಲಿನ 3000KL (30 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಮಾಡಿದೆ.    

ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು,

ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ  ಹೇಳಿದ್ದರು.

ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬುಧವಾರ ಕರ್ನಾಟಕ ಸರಕಾರಕ್ಕೆ 2022-23ನೇ ಪಾಲಿನ 3000KL (30 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ನೀಡಿದೆ.

ಇದೀಗ ಕೇಂದ್ರ ಸರ್ಕಾರ ನೀಡುತ್ತಿರುವ ಹೆಚ್ಚುವರಿ ಸೀಮೆಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಣೆ ಮಾಡಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದಕ್ಷಿಣ ಕೊರಿಯಾದಿಂದ ಉತ್ತರ ಕೊರಿಯಾ ಮೇಲೆ ಕ್ಷಿಪಣಿ ಉಡಾವಣೆ!

shobha karandlaje

ಕರಾವಳಿಯ ಮೀನುಗಾರರ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗಿದ್ದು, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ

ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿರುವುದು ಶ್ಲಾಫನೀಯ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಸದ್ಯ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿರಿ: TWITTER ದೂರುವುದಿದ್ದರೆ ದೂರಿ; ತಿಂಗಳಿಗೆ ಎಂಟು ಡಾಲರ್‌ ಕೊಡಿ ಎಂದ ಎಲಾನ್‌ ಮಸ್ಕ್‌!  

Barge Fishermen

ಪರಿಸರ ಮಾಲಿನ್ಯ ತಡೆಗೆ ಮನವಿ

ಮೀನುಗಾರರು ಪರಿಸರ ಮಾಲಿನ್ಯ ತಡೆಗೆ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ಮೀನುಗಾರರಿಗೆ ಪೆಟ್ರೋಲ್ ಇಂಜಿನ್ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ.

ಪೆಟ್ರೋಲ್ ಇಂಜಿನ್ ಬಳಸಿ ನಾಡದೋಣಿ ಮೀನುಗಾರಿಕೆ ಮಾಡಬೇಕು.

ಮೀನುಗಾರಿಕೆ (ದೋಣಿ ನಡೆಸುವಾಗ) ಅತ್ಯಂತ ಕಡಿಮೆ ಸೀಮೆ ಎಣ್ಣೆಯನ್ನು ಬಳಸುವ ಮೂಲಕ ಮಾಲಿನ್ಯ  ಕಡಿವಾಣಕ್ಕೆ ಸಹಕಾರ ನೀಡಬೇಕು.

ಸದ್ಯ ಮೀನುಗಾರರಿಗೆ ತಾತ್ಕಾಲಿಕವಾಗಿ ಸೃಷ್ಟಿಯಾಗಿರುವ ಸಮಸ್ಯೆಯನ್ನು ಕಾಲಮಿತಿಯಲ್ಲಿ ಪರಿಹರಿಸಿಕೊಳ್ಳಲಾಗುವುದು.  

ಮುಂದಿನ ಒಂದೆರಡು ದಿನಗಳಲ್ಲಿ ಮೀನುಗಾರರಿಗೆ ಸೀಮೆ ಎಣ್ಣೆ ಸಿಗಲಿದೆ.  

Barge Fishermen

ಆದರೆ,ಮುಂದಿನ ದಿನಗಳಲ್ಲಿ ಪೆಟ್ರೋಲ್ ಇಂಜಿನ್ ಬಳಕೆಯನ್ನು ಹೆಚ್ಚಿಸುವುದಾಗಿ ಎಂದು ಮೀನುಗಾರಿಕೆ ಸಚಿವ ಅಂಗಾರ ತಿಳಿಸಿದ್ದಾರೆ.

ಮಲ್ಪೆ ಬಂದರು ವ್ಯಾಪ್ತಿಯ ನಾಲ್ಕು ಪ್ರದೇಶಗಳಲ್ಲಿ ಹೂಳೆತ್ತುವುದಕ್ಕೆ ಈಗಾಗಲೇ ಕ್ರಿಯಾ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ.

ಆದರೆ, ಈ ಪ್ರಕ್ರಿಯೆಗೆ ಕೆಲವರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿದೆ.  

ಅಲ್ಲದೇ ಈ ವಿಷಯವಾಗಿ ಕೆಲವರು ನ್ಯಾಯಾಲಯದ ಮೊರೆಯೂ ಹೋಗಿದ್ದಾರೆ.

ಹೀಗಾಗಿ, ಈ ಪ್ರಕ್ರಿಯೆ ವಿಳಂಬವಾಗುತ್ತಿದೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.  

ಹೆಚ್ಚುವರಿಯಾಗಿ ಕೇಂದ್ರ ಸರ್ಕಾರದಿಂದ ಸಿಗುತ್ತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಣೆ ಮಾಡುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದು, ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿರುವುದು ಶ್ಲಾಘನೀಯ ಎಂದರು. 

kerosene

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಲ್ಲಿಯವೆರೆಗೆ ಸಾಂಪ್ರದಾಯಿಕವಾಗಿ ನಡೆಯತ್ತಿರುವ ನಾಡದೋಣಿ ಚಲಾಯಿಸುವ ಮೀನುಗಾರಿಕೆಗೆ

ಹಂಚಿಕೆಯಾಗಿದ್ದ ಸೀಮೆಎಣ್ಣೆ ಸಮರ್ಪಕವಾಗಿ ಲಭ್ಯವಾಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಮೀನುಗಾರರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಟಾಟಾ ಗ್ರೂಪ್‌ನಿಂದ 45 ಸಾವಿರ ಜನರಿಗೆ ಉದ್ಯೋಗಾವಕಾಶ!  

kerosene

ಮೀನುಗಾರರಿಗೆ ಹಂಚಿಕೆಯಾಗಿರುವ ಸೀಮೆಎಣ್ಣೆಯನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು.

ಈ ಮೂಲಕ ಕರಾವಳಿಯ ಮೀನುಗಾರರ ನೆರವಿಗೆ ಬರಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟದ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಸಲ್ಲಿಸಲಾಗಿತ್ತು.   

ಇದನ್ನೂ ಓದಿರಿ: 1.4 ಕೋಟಿಗೂ ಹೆಚ್ಚು PF ಚಂದಾದರರಿಗೆ ಸಿಗಲಿದೆ ಬಡ್ಡಿ ಮೊತ್ತ!