1. ಸುದ್ದಿಗಳು

Good News ರಾಜ್ಯ ಸರ್ಕಾರದಿಂದ ಡೆಲಿವರಿ ಬಾಯ್ಸ್‌ಗಳಿಗೆ ಸಿಹಿಸುದ್ದಿ!

Hitesh
Hitesh
Good News for delivery boys from the state government!

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.

1.ರಾಜ್ಯದ 161 ತಾಲ್ಲೂಕುಗಳಲ್ಲಿ ತೀವ್ರ ಬರ: ಸರ್ಕಾರದಿಂದ ಘೋಷಣೆ
2. ಕಾಂಗ್ರೆಸ್‌ ಬಂದರೆ ಬರ ನಿಶ್ಚಿತ ಎಂದ ಬಿಜೆಪಿ!
3. ರಾಜ್ಯ ಸರ್ಕಾರದಿಂದ ಡೆಲಿವರಿ ಬಾಯ್ಸ್‌ಗಳಿಗೆ ಸಿಹಿಸುದ್ದಿ!
4. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಸಂಕಷ್ಟದಲ್ಲಿ ಕರ್ನಾಟಕ
5. ಏಷ್ಯಾ ಕಪ್ ಪಂದ್ಯಾವಳಿ ಇಂದು ನಿರ್ಣಾಯಕ ಪಂದ್ಯ
6. ಕೋಲ್ಡ್ ಚೈನ್ ಆನ್‌ಬ್ರೋಕನ್ 2023ರಲ್ಲಿ ಕೃಷಿ ಜಾಗರಣ ಅಗ್ರಿಕಲ್ಚರ್‌ ವರ್ಡ್

ಸುದ್ದಿಗಳ ವಿವರ ಈ ರೀತಿ ಇದೆ. 

1. ರಾಜ್ಯದಲ್ಲಿ ಈ ಬಾರಿ ತೀವ್ರ ಮಳೆಯ ಕೊರತೆಯಿಂದಾಗಿ ಹಿಂದೆಂದಿಗಿಂತಲೂ ತೀವ್ರವಾದ ಬರದ ಛಾಯೆ ಅವರಿಸಿದೆ.

ಮುಂಗಾರು ಮುಕ್ತಾಯವಾಗುತ್ತಿದ್ದು, ತೀವ್ರವಾದ ಮಳೆ ಕೊರತೆ ಇದೆ. ಇದೀಗ ರಾಜ್ಯ ಸರ್ಕಾರವು ಬರ ತಾಲ್ಲೂಕುಗಳನ್ನು ಘೋಷಿಸಿದೆ.

161 ತಾಲ್ಲೂಕುಗಳಲ್ಲಿ ತೀವ್ರವಾದ ಬರ ಹಾಗೂ 34 ತಾಲ್ಲೂಕುಗಳಲ್ಲಿ ಸಾಧಾರಣ ಬರ ಎಂದು ಘೋಷಿಸಿದೆ.

ಮಳೆಯ ಕೊರತೆಯಿಂದಾಗಿ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸುವಂತೆ ಸಚಿವ ಸಂಪುಟದ

ಉಪಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸ್ಸು ಸಲ್ಲಿಸಿತ್ತು.
-----------
2. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಬರ ಎಂಬ ಗ್ಯಾರಂಟಿ ಖಚಿತ ಮತ್ತು ನಿಶ್ಚಿತ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ರಾಜ್ಯವನ್ನು ಆಳಿದ ಅವಧಿಯ ಬಹುಪಾಲು ರಾಜ್ಯ ಬರಪೀಡಿತವಾಗಿತ್ತು.

ಆದರೆ, ಈ ಬಾರಿ ತುಸು ಹೆಚ್ಚೇ ಎಂಬಂತೆ ಬರದ ಕರಿಛಾಯೆ, ರಾಜ್ಯದ ಜನತೆಯ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಆರೋಪಿಸಿದೆ.  
----------- 

3. ರಾಜ್ಯ ಸರ್ಕಾರವು ಡೆಲಿವರಿ ಬಾಯ್ಸ್‌ಗಳಿಗೆ 2 ಲಕ್ಷ ರೂಪಾಯಿ ಜೀವವಿಮೆ ಮತ್ತು 2 ಲಕ್ಷ ರೂಪಾಯಿ ಅಪಘಾತ ಪರಿಹಾರ

ವಿಮಾ ಸೌಲಭ್ಯ ಕಲ್ಪಿಸಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಡೆಲಿವರಿ ಬಾಯ್ಸ್‌ಗಳಿಗೆ ವಿಮಾ

ಸೌಲಭ್ಯ ಕಲ್ಪಿಸಿದ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
-----------
4. ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ಈಗ ನಮ್ಮ ಮುಂದೆ ಎರಡು ಆಯ್ಕೆಗಳಿವೆ.

ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸುವುದು.

ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವ ಬಗ್ಗೆ

ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು.

ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.

ಇದೇ 18ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ

ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು ಎಂದು ನಿರ್ಧರಿಸಲಾಗಿದೆ

ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ ಎಂದಿದ್ದಾರೆ.
-----------
5. ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ನಿರ್ಣಾಯಕ ಸೂಪರ್ ಫೋರ್ ಪಂದ್ಯದ ಭಾಗವಾಗಿ ಗುರುವಾರ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು

ಮುಖಾಮುಖಿಯಾಗಲಿವೆ. ಬಾಂಗ್ಲಾದೇಶ ಈಗಾಗಲೇ ಟೂರ್ನಿಯಿಂದ ಹೊರಬಿದಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಭಾನುವಾರ

ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲಿದೆ.

ಭಾರತವು ಶುಕ್ರವಾರ ಬಾಂಗ್ಲಾದೇಶದ ವಿರುದ್ಧ ಕೊನೆಯ ಸೂಪರ್ ಫೋರ್ ಪಂದ್ಯ ಆಡಲಿದೆ.   

Published On: 14 September 2023, 03:41 PM English Summary: Good News for delivery boys from the state government!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.