1. ಸುದ್ದಿಗಳು

ದೀಪಾವಳಿ ನಿಮಿತ್ತ ರೈತರಿಗೆ ಸಿಹಿಸುದ್ದಿ: ಹಿಂಗಾರು ಬೆಳೆಗಳ MSP ಹೆಚ್ಚಳ ಅನುಮೋದನೆ!

Kalmesh T
Kalmesh T
Good news for farmers on the occasion of Diwali: MSP hike of fallow crops approved!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ.

ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ಗೊತ್ತೆ?

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಲು ಸರ್ಕಾರವು -23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಹಿಂಗಾರು ಬೆಳೆಗಳ ಎಂಎಸ್‌ಪಿಯನ್ನು ಹೆಚ್ಚಿಸಿದೆ.

ಹಿಂದಿನ ವರ್ಷಕ್ಕಿಂತ ಎಂಎಸ್‌ಪಿಯಲ್ಲಿ (MSP) ಹೆಚ್ಚಳವನ್ನು ಲೆಂಟಿಲ್ (ಮಸೂರ) ಮತ್ತು ರಾಪ್ಸೀಡ್ಸ್ & ಸಾಸಿವೆ (ಪ್ರತಿ ಕ್ವಿಂಟಾಲ್‌ಗೆ ರೂ .400) ಮತ್ತು ಕಡಲೆ (ಕ್ವಿಂಟಾಲ್‌ಗೆ ರೂ .130) ಗೆ ಮಾಡಲಾಗಿದೆ.

ಕುಸುಬೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರತಿ ಕ್ವಿಂಟಾಲ್‌ಗೆ ರೂ .114 ಹೆಚ್ಚಳವಾಗಿದೆ. ವಿವಿಧ ಬೆಲೆಗಳು ಬೆಳೆ ವೈವಿಧ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿವೆ.

ಜಾನುವಾರು ಮಾಲೀಕರಿಗೆ ಸಿಹಿಸುದ್ದಿ; ದೇಶದ ಎಲ್ಲಾ ಪಂಚಾಯತ್‌ಗಳಲ್ಲಿ ಸರ್ಕಾರ ಡೈರಿ ತೆರೆಯಲು ನಿರ್ಧಾರ!

ಮಾನವ ದುಡಿಮೆಯ ಕೂಲಿ, ಎತ್ತುಗಳ ಕೆಲಸ/ಯಂತ್ರದ ಕೆಲಸ, ಭೂಮಿಯ ಭೋಗ್ಯಕ್ಕೆ ಪಾವತಿಸಿದ ಹಣ, ಬೀಜಗಳು, ರಸಗೊಬ್ಬರಗಳು, ಗೊಬ್ಬರಗಳು, ನೀರಾವರಿ ಶುಲ್ಕಗಳು, ಉಪಕರಣಗಳು ಮತ್ತು ಕೃಷಿ ಕಟ್ಟಡಗಳ ಮೇಲಿನ ಸವಕಳಿ, ದುಡಿಯುವ ಬಂಡವಾಳದ ಮೇಲಿನ ಬಡ್ಡಿ, ಪಂಪ್ ಸೆಟ್ ಗಳ ಕಾರ್ಯನಿರ್ವಹಣೆಗೆ ಡೀಸೆಲ್/ವಿದ್ಯುತ್, ಇತ್ಯಾದಿ ವೆಚ್ಚಗಳು ಮತ್ತು ಕುಟುಂಬ ಕಾರ್ಮಿಕರ ಅಂದಾಜು ಮೌಲ್ಯಗಳು ಇದರಲ್ಲಿ ಸೇರಿವೆ.

2022-23 ರ ಮಾರುಕಟ್ಟೆ ಹಂಗಾಮಿನ ಹಿಂಗಾರು ಬೆಳೆಗಳಿಗೆ ಎಮ್‌ಎಸ್‌ಪಿಯ ಹೆಚ್ಚಳವು ಕೇಂದ್ರ ಬಜೆಟ್ 2018-19ರ ಘೋಷಣೆಗೆ ಅನುಗುಣವಾಗಿದೆ.

ಇದರಲ್ಲಿ ಎಮ್‌ಎಸ್‌ಪಿ (MSP) ಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ. ಇದು ರೈತರಿಗೆ ಸಮಂಜಸವಾದ ನ್ಯಾಯೋಚಿತ ಬೆಲೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉತ್ಪಾದನಾ ವೆಚ್ಚದ ಮೇಲೆ ರೈತರಿಗೆ ನಿರೀಕ್ಷಿತ ಆದಾಯವು ಗೋಧಿ ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ (ತಲಾ 100%) ಅತಿ ಹೆಚ್ಚು ಎಂದು ಅಂದಾಜಿಸಲಾಗಿದೆ.

ದ್ವಿದಳ ಧಾನ್ಯ (79%) ದಲ್ಲಿ; ಕಡಲೆ (74%); ಬಾರ್ಲಿ (60%); ಕುಸುಬೆ (50%) ನಂತರದ ಸ್ಥಾನದಲ್ಲಿವೆ.

1 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರದಿಂದ ದೀಪಾವಳಿ ಬಂಪರ್‌ ಗಿಫ್ಟ್‌!

ರೈತರು ಎಣ್ಣೆಬೀಜಗಳು, ದ್ವಿದಳ ಧಾನ್ಯಗಳು ಮತ್ತು ಒರಟು ಸಿರಿಧಾನ್ಯಗಳನ್ನು ದೊಡ್ಡ ಪ್ರದೇಶದಲ್ಲಿ ಬೆಳೆಯುವುದನ್ನು ಉತ್ತೇಜಿಸಲು ಮತ್ತು ಉತ್ತಮ ತಂತ್ರಜ್ಞಾನ ಮತ್ತು ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಾಗೂ ಬೇಡಿಕೆ -ಪೂರೈಕೆ ನಡುವಿನ ಅಸಮತೋಲನವನ್ನು ಸರಿಪಡಿಸಲು ಕಳೆದ ಕೆಲವು ವರ್ಷಗಳಲ್ಲಿ ಎಮ್‌ಎಸ್‌ಪಿಗಳನ್ನು ಈ ಬೆಳೆಗಳ ಪರವಾಗಿ ಮರುಸಂಯೋಜಿಸಲು ಪ್ರಯತ್ನಿಸಲಾಗಿದೆ.

ಹೆಚ್ಚುವರಿಯಾಗಿ, ಕೇಂದ್ರ ಪ್ರಾಯೋಜಿತ ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್ –ಎಣ್ಣೆ ತಾಳೆ ಯೋಜನೆಯನ್ನು ಇತ್ತೀಚೆಗೆ ಸರ್ಕಾರ ಘೋಷಿಸಿದೆ.

ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

ಒಟ್ಟು ರೂ .11,040 ಕೋಟಿಯೊಂದಿಗೆ, ಈ ಯೋಜನೆಯು ಕ್ಷೇತ್ರದ ವಿಸ್ತರಣೆ ಮತ್ತು ಉತ್ಪಾದಕತೆಗೆ ನೆರವು ನೀಡುವುದಲ್ಲದೆ, ರೈತರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಉದ್ಯೋಗ ಸೃಷ್ಟಿಸುತ್ತದೆ.

8ನೇ ತರಗತಿ ಪಾಸ್‌ ಆದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ; 60,000 ವೇತನ!

2018 ರಲ್ಲಿ ಸರ್ಕಾರ ಘೋಷಿಸಿದ ಯೋಜನೆ "ಪ್ರಧಾನ ಮಂತ್ರಿ ಅನ್ನದಾತ ಆಯ ಸಂರಕ್ಷಣಾ ಅಭಿಯಾನ" (PM-AASHA) ರೈತರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ನೀಡಲು ಸಹಾಯ ಮಾಡುತ್ತದೆ.

ಈ ಯೋಜನೆಯು ಮೂರು ಉಪ ಯೋಜನೆಗಳನ್ನು ಒಳಗೊಂಡಿದೆ, ಅವುಗಳೆಂದರೆ, ಬೆಲೆ ಬೆಂಬಲ ಯೋಜನೆ (ಪಿ ಎಸ್ ಎಸ್), ಬೆಲೆ ಕೊರತೆ ಪಾವತಿ ಯೋಜನೆ (ಪಿ ಡಿ ಪಿ ಎಸ್) ಮತ್ತು ಖಾಸಗಿ ಖರೀದಿ ಮತ್ತು ಸಂಗ್ರಹ ಯೋಜನೆ (ಪಿ ಪಿ ಎಸ್ ಎಸ್).

Published On: 12 October 2022, 04:16 PM English Summary: Good news for farmers on the occasion of Diwali: MSP hike of fallow crops approved!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.