News

IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!

15 May, 2022 10:37 AM IST By: Kalmesh T
Good News For formers ; IMD Monsoon Entering Karnataka

ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ. ಈ ಬಾರಿ ರಾಜ್ಯದಲ್ಲಿ ಪ್ರತಿ ವರ್ಷಕ್ಕಿಂತ ಮೊದಲೇ ಮುಂಗಾರು ಮಳೆ ಪ್ರವೇಶವನ್ನು ಪಡೆಯಲಿದೆ.

May ಅಂತ್ಯಕ್ಕೆ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರವೇಶದ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಇದನ್ನೂ ಓದಿರಿ: Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!

PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ

ಪ್ರತಿ ವರ್ಷ June 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶ ಆಗುತ್ತಿತ್ತು. ಆದರೆ ಈ ಬಾರಿ ಮೇ 27ಕ್ಕೆ ಕೇರಳಕ್ಕೆ, ನಂತರ 3 ದಿನದಲ್ಲಿ ರಾಜ್ಯಕ್ಕೆ ಮಾನ್ಸೂನ್ ಮಾರುತುಗಳು ಕರ್ನಾಟಕವನ್ನು ಪ್ರವೇಶಿಸಲಿವೆ ಎಂದು ತಜ್ಞರು ತಿಳಿಸಿದ್ದಾರೆ.

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಾನ್ಸೂನ್ ಮಾರುತಗಳ ಪ್ರವೇಶ ಆರಂಭವಾಗಲಿದೆ. ಇದರಿಂದ ಬಿಸಿಲಿನ ಪ್ರಮಾಣ ಸಹ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದಾದ ಬಳಿಕ ಮಾರುತಗಳು ದಕ್ಷಿಣ ಮತ್ತು ಉತ್ತರ ನಾಡನ್ನು ಪ್ರವೇಶಿಸುತ್ತವೆ.

ಸಾಮಾನ್ಯ ಜನರಿಗೆ ಮಾನ್ಸೂನ್ ಮಳೆ ಬಂದರೆ ಬಿಸಿಲು ಕಡಿಮೆ ಆಗುತ್ತೆ. ಆದರೆ ಈ ಮಳೆ ಕೃಷಿ ವಲಯದಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಮಾನ್ಸೂನ್ ಮಳೆಯ ಜೊತೆಯಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತವೆ.

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

ಇನ್ನೂ ಈ  ವರ್ಷ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ರೈತ ವರ್ಗ ಸಂತಸದಲ್ಲಿದೆ. ಕಳೆದ ವರ್ಷ ಅಕಾಲಿಕ ಮಳೆ ರೈತರನ್ನ ಸಂಕಷ್ಟಕ್ಕೆ ದೂಡಿತ್ತು.

ದೆಹಲಿ-ಎನ್ಸಿಆರ್, ಯುಪಿ, ಮಧ್ಯಪ್ರದೇಶ, ಬಿಹಾರ, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಅತಿಯಾದ ತಾಪಮಾನ ದಾಖಲಾಗುತ್ತಿದೆ. ಈ ಭಾಗದ ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

Central Government Scheme! Pashu kisan credit card scheme! ನಿಂದ ನಿಮಗೆ ಪಶುಸಂಗೋಪನೆಗಾಗಿ 60,000 ರೂಪಾಯಿ ನೀಡಲಾಗುತ್ತೆ!

ಸಾಮಾನ್ಯವಾಗಿ ಜೂನ್ 1ರಿಂದ ಮುಂಗಾರು ಆರಂಭವಾಗುತ್ತಿತ್ತು. ಈ ಬಾರಿ 4 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ. ಹವಾಮಾನ ಇಲಾಖೆಯ ಪ್ರಕಾರ ಮೇ 20ರಂದು ಮಾನ್ಸೂನ್ ಮಾರುತುಗಳ ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ.

2020ರಲ್ಲಿ ಜೂನ್ 1 ಮತ್ತು 2019ರಲ್ಲಿ ಜೂನ್ 8ರಂದು ಕೇರಳದ ಕರಾವಳಿಯನ್ನು ಮಾನ್ಸೂನ್ ಮಾರುತಗಳು ತಲುಪಿದ್ದವು. ಈ ವರ್ಷ ಉತ್ತರ ಭಾರತದ ರಾಜ್ಯದಲ್ಲಿ ಜೂನ್ 15ಕ್ಕೂ ಮುಂಚೆಯೇ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Atal Pension Yojana: 4 ಕೋಟಿಗೂ ಹೆಚ್ಚು ಜನರಿಗೆ ಲಾಭವಾದ ಈ ಯೋಜನೆಯ ಲಾಭ ನೀವು ಪಡೆದಿದ್ದೀರಾ?

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!