ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಪರಿಷ್ಕರಣೆಗೆ ಸಂಬಂದಿಸಿದಂತೆ ಸಿಹಿ ಸುದ್ದಿಯೊಂದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿದ್ದಾರೆ. ಇಲ್ಲಿದೆ ಈ ಕುರಿತಾದ ಮಾಹಿತಿ
ಸರ್ಕಾರಿ ನೌಕರರಿಗೆ 4% ಡಿಎ ಹೆಚ್ಚಳದ ಕುರಿತಾಗಿ ಶೀಘ್ರದಲ್ಲೇ ಬರಲಿದೆ 7 ನೇ ವೇತನ ಆಯೋಗದ ಅಪ್ಡೇಟ್
ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿತ್ತು.
ಈಗ ಇದಕ್ಕಾಗಿಯೇ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕಾಡಾನೆಗಳ ಹಾವಳಿಯಿಂದ ಮುಕ್ತಿ ನೀಡಲು Project REHAB ಮಾಸ್ಟರ್ ಪ್ಲಾನ್
ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು. ವರದಿ ಶೀಘ್ರ ಬರಲಿದ್ದು, ಅದರನುಸಾರ ಕ್ರಮ ವಹಿಸಲಾಗುವುದು ಎಂದಿದ್ದಾರೆ.
2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು. ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.
ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ನೌಕರರಿಗೆ 4% ಡಿಎ ಹೆಚ್ಚಳ
ಸರ್ಕಾರಿ ನೌಕರರ ಡಿಎ ಹೆಚ್ಚಳದ ಕುರಿತಾಗಿ ಶೀಘ್ರದಲ್ಲೆ ಏಳನೇ ವೇತನ ಆಯೋಗದಿಂದ ಮುಖ್ಯವಾದ ಅಪ್ಡೇಟ್ ಬರಲಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ.
7th Pay Commission update: CPI(IW) ಅಂಕಿಅಂಶವು ಡಿಸೆಂಬರ್ 2022 ರವರೆಗೆ 132.3 ನಲ್ಲಿ ಮುಂದುವರಿಯುತ್ತದೆ. ಇದರಿಂದ ತುಟ್ಟಿಭತ್ಯೆಯನ್ನು ಶೀಘ್ರದಲ್ಲೇ 4% ಕ್ಕಿಂತ ಹೆಚ್ಚು ಹೆಚ್ಚಿಸಲಾಗುವುದು ಎಂದು ಡೇಟಾವು ಸ್ಪಷ್ಟಪಡಿಸುತ್ತದೆ.
ಹೋಳಿ ಹಬ್ಬದ ಮೊದಲು ಕೇಂದ್ರ ಸರ್ಕಾರಿ ನೌಕರರು ಬಹುಶಃ ಒಳ್ಳೆಯ ಸುದ್ದಿಯನ್ನು ಪಡೆಯಲಿದ್ದಾರೆ. ತುಟ್ಟಿ ಭತ್ಯೆಯಲ್ಲಿ (ಡಿಎ) 4% ಹೆಚ್ಚಳವನ್ನು ನಿರೀಕ್ಷಿಸಲಾಗಿದೆ.