News

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಆರು ತಿಂಗಳಲ್ಲಿ ಶಿಫಾರಸ್ಸು ಸಾಧ್ಯತೆ!

20 November, 2022 11:44 AM IST By: Hitesh
basavaraj bommai

ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ 7ನೇ ವೇತನ (pay commission) ಆಯೋಗ ರಚನೆ ಮಾಡಿ ಆದೇಶ ಮಾಡಿದೆ. ಇದೀಗ ಏಳನೇ ವೇತನ ಆಯೋಗದ ಪ್ರಕ್ರಿಯೆಗಳನ್ನು ಚುರುಕುಗೊಳಿಸಿದೆ.  

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸುಧಾಕರ್ ರಾವ್ ನೇತೃತ್ವದಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅವರ ಅಧ್ಯಕ್ಷತೆಯಲ್ಲಿ  7ನೇ ವೇತನ (pay commission) ಆಯೋಗ  ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ.

ಆಯೋಗಕ್ಕೆ ಮೂವರು ಸದಸ್ಯರ ನೇಮಕ ಮಾಡಲಾಗಿದ್ದು, ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿರಿ: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌: 7 ನೇ ವೇತನ ಆಯೋಗ ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ 

ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

7ನೇ ವೇತನ (pay commission) ಆಯೋಗ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ

(ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲನೆ ನಡೆಸಲಿದೆ.

7ನೇ ವೇತನ ಆಯೋಗ ರಚಿಸುವುದಾಗಿ CM ಬೊಮ್ಮಾಯಿ ಘೋಷಣೆ!

ಈ ಪರಿಶೀಲನೆ ಪ್ರಕ್ರಿಯೆಗಳು ಮುಕ್ತಾಯವಾದ ನಂತರದಲ್ಲಿ ಯಾವ ನಿರ್ದಿಷ್ಟ ಮೊತ್ತದಲ್ಲಿ (ಕಾರ್ಯಸಾಧುವಾದ) ನೂತನ ವೇತನ ಶ್ರೇಣಿಯನ್ನು ಶಿಫಾರಸ್ಸು ಮಾಡಲಿದೆ.

ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರಗಳನ್ನು ರೂಪಿಸುವುದು.

ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು,

ನಿವೃತ್ತಿ ವೇತನ ಹಾಗೂ ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿನೆ ನಡೆಸಿ, ಶಿಫಾರಸ್ಸು ಮಾಡಲಿದೆ.

ಅಲ್ಲದೇ ಸರ್ಕಾರದ ಸಂಪನ್ಮೂಲಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲ ಮತ್ತು ವಿತ್ತೀಯ

ಹೊಣೆಗಾರಿಕೆ ಅಧಿನಿಯಮ, 2002ರ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ವೇತನ ಆಯೋಗವು ಆರು ತಿಂಗಳ ಒಳಗಾಗಿ ತನ್ನ ಶಿಫಾರಸ್ಸು ಮಾಡಲು ನಿರ್ದೇಶನ ನೀಡಲಾಗಿದೆ. 

ರೈತರ ಮಕ್ಕಳಿಗೆ ಸಿಹಿಸುದ್ದಿ: ಶಿಕ್ಷಣದಲ್ಲಿ ಶೇ.10% ಮೀಸಲಾತಿ; 430 ಸೀಟು ಲಭ್ಯ- ಬಿ.ಸಿ ಪಾಟೀಲ್‌!