ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಹೌದು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದಕ್ಕಾಗಿ ಗಂಗಾವತಿ ಹಾಗೂ ಕಾರವಾರದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೋಮಾ ಸೇರಿದಂತೆ ಇತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದು.
ಕೊಪ್ಪಳ ಜಿಲ್ಲೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಫೆ.8 ರಂದು ಗಂಗಾವತಿಯ ಆನೆಗೊಂದಿ ರಸ್ತೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮೇಳೆ ನಡೆಯಲಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ., ಡಿಪ್ಲೊಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಪ್ರವೇಶ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08539-220859, ಮೊಬೈಲ್: 8105848991 ಸಂಪರ್ಕಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಕೊವಿಡ್ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ತಿಳಿಸಿದ್ದಾರೆ.
ಕಾರವಾರದಲ್ಲಿ ಫೆ. 12 ರಂದು ಉದ್ಯೋಗ ಮೇಳ
ಕಾರವಾರ ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿಯಿಂದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ನಗರದ ಕಾಜುಭಾಗ ರಸ್ತೆಯ ಸರ್ಕಾರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಫೆ.12ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ. 25ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಸೆಸ್ಸೆಲ್ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ಹಾಗೂ ಪದವಿ ಅಧ್ಯಯನ ಮಾಡಿದ ಅಭ್ಯರ್ಥಿಗಳು ಹಾಜರಾಗಬಹುದು.