Good news for ration card holders: ಕಾಂಗ್ರೆಸ್ ಭರವಸೆ ನೀಡಿದ್ದ 10 ಕೆ.ಜಿ ಉಚಿತ ಅಕ್ಕಿಯನ್ನು (10 kg ration free)ಇದೆ ಜುಲೈ 1ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶಿಸಿದ್ದಾರೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗಿರುವ ಅಂತೋದಯ ಅನ್ನ ಯೋಜನೆ (Antyodaya Ann Yojana) ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಕ್ಕೆ ಪ್ರತಿ ತಿಂಗಳು ಫಲಾನುಭವಿಗಳ ಪರಿಗಣನೆಗೆ ತೆಗೆದುಕೊಳ್ಳದೇ 35 ಕೆ.ಜಿ, ಆಹಾರ ಧಾನ್ಯವನ್ನು ಹಾಗೂ ಆಧ್ಯಾತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ಒದಗಿಸುತ್ತಿದೆ.
ಇದರೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ (Ration card holders) ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯವನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ, ಉಚಿತವಾಗಿ ವಿತರಿಸಲಾಗುತ್ತಿದೆ.
ಇದೀಗ ಹೊಸ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಆದೇಶದಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುತ್ತಿರುವ 5ಕೆ.ಜಿ, ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಆದೇಶಿಸಲಾಗಿದೆ.
ರಾಜ್ಯದಲ್ಲಿ ವಿತರಿಸಲಾಗಿರುವ ಆದ್ಯತಾ ಮತ್ತು ಅಂತೋದಯ ಅನ್ನ ಯೋಜನ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಒಟ್ಟು 10 ಕೆ.ಜಿ (10 kg ration free) ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.
ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ, ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆ.ಜಿ, ಆಹಾರ ಧಾನ್ಯವನ್ನು ವಿತರಿಸಲು ತೀರ್ಮಾನಿಸಲಾಗಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ ವಿತರಿಸಲಾಗಿರುವ ಅಂತ್ಯೋದಯ ಅನ್ನ ಯೋಜನೆ (AAY), ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ, ಆಹಾರ ಧಾನ್ಯವನ್ನು ದಿನಾಂಕ:01.07.2023 ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಿದೆ.
ಸದರಿ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 50 ವೆಚ್ಚ-5 ದಿನಾಂಕ: 01.06.2023ರಲ್ಲಿ ನೀಡಿರುವ ಸಹಮತಿಯನ್ನಯ ಹೊರಡಿಸಲಾಗಿದೆ.