News

ಗುಡ್‌ನ್ಯೂಸ್‌: ಕುಲಕಸುಬು ವೃತ್ತಿಗಳಿಗೆ ರಾಜ್ಯದಿಂದ ತಲಾ ₹50,000 ಸಹಾಯಧನ! ಯಾರು ಅರ್ಹರು ಗೊತ್ತೆ?

16 August, 2022 11:58 AM IST By: Kalmesh T
Goodnews: ₹50,000 subsidy each from the state for craftsman’s professions!

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ (Karnataka State Handicrafts Development Corporation Limited) ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್‌: ಕರ್ತವ್ಯದ ವೇಳೆ ನಿಧನರಾಗುವ ಈ ಉದ್ಯೋಗಿಗಳ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ!

Independence Day-2022: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಸ್ವಾತಂತ್ರ್ಯ ದಿನದ ಅಂಗವಾಗಿ ರಾಜ್ಯದ ಕುಲಕಸುಬುಗಳನ್ನು ನಿರ್ವಹಿಸುವ ವರ್ಗಗಳಾದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರರಿಗೆ ತಲಾ 50,000 ಸಾಲ ಸಹಾಯಧನವನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Postal Jobs: ಯುವಜನತೆಗೆ ಭರ್ಜರಿ ಸುದ್ದಿ: ಅಂಚೆ ಇಲಾಖೆಯಲ್ಲಿದೆ 1 ಲಕ್ಷ ಖಾಲಿ ಹುದ್ದೆ!

Independence Day-2022: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ಯುವಜನತೆಗೆ ಉದ್ಯೋಗ ಮಾಡಲು ಇಲ್ಲಿದೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಲಕ್ಷ ಸಾಲ..ಅರ್ಜಿ ಸಲ್ಲಿಸುವುದು ಹೇಗೆ?

ಈ ಏಕತೆಯನ್ನು ಸಾರಲು ನಮ್ಮ ದೇಶಭಕ್ತಿಯನ್ನು ವ್ಯಕ್ತಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಸ್ಪಂದಿಸಿ, ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ 'ಹರ್ ಘರ್ ತಿರಂಗ' (HarGharThiranga) ಅಭಿಯಾನವು ಅಭೂತಪೂರ್ವ ಯಶಸ್ಸು ಕಂಡಿದೆ.

ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾಗುವ ರಾಜ್ಯದ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿರುವ ಬಸವರಾಜ ಬೊಮ್ಮಾಯಿ, ಯಾವುದೇ ವಿಳಂಬ ಮಾಡದೇ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರವನ್ನೂ ನೀಡುವುದಾಗಿ ಘೋಷಿಸಿದ್ದಾರೆ ( CM Announcement ).

ಕನ್ನಡ ನಾಡಿನಲ್ಲಿ ಕಿತ್ತೂರು ವೀರರಾಣಿ ಚೆನ್ನಮ್ಮ, ವೀರಸಂಗೊಳ್ಳಿ ರಾಯಣ್ಣ ಮೊದಲಾದವರು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ ಸಾಮ್ರಾಜ್ಯಶಾಹಿ ಬ್ರಿಟೀಷರ ವಿರುದ್ಧ ನಡೆಸಿದ ಹೋರಾಟ ಮೈ ನವಿರೇಳಿಸುತ್ತದೆ.

ಇವರೆಲ್ಲರ ತ್ಯಾಗದ ಫಲವಾಗಿ ದೊರೆತ ಸ್ವಾತಂತ್ರ್ಯದ ಸವಿಯುಣ್ಣುವ ಜೊತೆಗೆ ದೇಶದ ಉನ್ನತಿಗಾಗಿ ನಮ್ಮ ಕರ್ತವ್ಯವನ್ನು ಅರಿತು ನಿರ್ವಹಿಸುವುದೇ ಆ ಮಹನೀಯರ ತ್ಯಾಗಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಅಭಿಪ್ರಾಯಪಟ್ಟರು.