News

BMTC: ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆಗಸ್ಟ್‌ 15 ರಂದು ಉಚಿತ ಬಸ್‌ ಪ್ರಯಾಣ!

12 August, 2022 10:37 AM IST By: Kalmesh T
Goodnews: Free bus travel on August 15 in the background of Independence Day!

75ನೇ ಸ್ವಾತಂತ್ರೋತ್ಸವ ಹಿನ್ನೆಲೆ ಜನರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಅ.15ರಂದು ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಇರಲಿದೆ.

ಇದನ್ನೂ ಓದಿರಿ: Breaking News: IT ದಾಳಿಯಲ್ಲಿ ಬರೋಬ್ಬರಿ 390 ಕೋಟಿ ಮೌಲ್ಯದ ಅಕ್ರಮ ಹಣ, ಬಂಗಾರ, ವಜ್ರ ಪತ್ತೆ!

Independence Day: 75ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಜನರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಅ.15ರಂದು ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಇರಲಿದೆ. ಇಡೀ ದಿನ ವೋಲ್ಲೋ ಸೇರಿ ಎಲ್ಲ ಬಿಎಂಟಿಸಿ (BMTC) ಬಸ್‌ಗಳಲ್ಲಿ ಪ್ರಯಾಣಿಕರು ಹಣ ಪಾವತಿಸದೆ ಉಚಿತವಾಗಿ ಸಂಚರಿಸಬಹುದು.

ಉಚಿತ ಪ್ರಯಾಣ ಕೊಟ್ಟರೆ ಬಿಎಂಟಿಸಿಗೆ 3 ಕೋಟಿ ರೂಪಾಯಿ ನಷ್ಟ ಆಗುತ್ತೆ. ಆದರೂ ಕೂಡ ಬಿಎಂಟಿಸಿ ಈ ಆಫರ್ ನೀಡಿದೆ. ಬಿಎಂಟಿಸಿ (BMTC)  ಆರಂಭಗೊಂಡು 25 ವರ್ಷ.

ಜತೆಗೆ 75ನೇ ಸ್ವಾತಂತ್ರೋತ್ಸವ ಈ ಎರಡೂ ಸಂಭ್ರಮಾಚಾರಣೆ ಹಿನ್ನೆಲೆ ಆ.15ರಂದು ಬೆಂಗಳೂರಿನಾದ್ಯಂತ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.

ಗುಡ್‌ನ್ಯೂಸ್‌: SSLC - PUC ವಿದ್ಯಾರ್ಥಿಗಳಿಗೆ ಇಲ್ಲಿದೆ ಬರೋಬ್ಬರಿ ₹1,25,000 ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಜೊತೆಗೆ ಯಾರೆಲ್ಲಾ ಒಂದೇ ಒಂದು ಅಪಘಾತ ಮಾಡದಂತೆ ಬಸ್ ಚಾಲನೆ ಮಾಡಿದ್ದಾರೋ ಆ ಚಾಲಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ.

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆ ಆಗಸ್ಟ್‌ 14ರಂದು 75 ಎಲೆಕ್ಟ್ರಿಕ್‌ ಬಸ್‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನಾಚರಣೆ - ಆಗಸ್ಟ್ 15

ಆಡಳಿತದಿಂದ ಭಾರತ ದೇಶ 1947 ರ ಆಗಸ್ಟ್ 15 ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.

ರೈತರಿಗೆ ಸಿಹಿಸುದ್ದಿ: “ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ; 5 ಲಕ್ಷ ಬಹುಮಾನ! ಈಗಲೇ ಅರ್ಜಿ ಸಲ್ಲಿಸಿ..

ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ.

ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ.

ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರಕ್ಕಾಗಿ ಹೋರಾಡಿದ ನಾಯಕರನ್ನು ಸ್ಮರಿಸಲಾಗುತ್ತದೆ.