ರಾಜ್ಯಾದ್ಯಂತ ನಕಲಿ ರಸಗೊಬ್ಬರ, ಬಿತ್ತನೆಬೀಜ, ಕೀಟನಾಶಕಗಳ ಹಾವಳಿ ಜೋರಾಗಿದೆ. ಉತ್ತಮ ಇಳುವರಿಯ ನೀರಿಕ್ಷೆಯಲ್ಲಿರುವ ರೈತರಿಗೆ ಇಂತಹ ದಂಧೆಕೋರರು ರೈತರ ಜೀವನವನ್ನೆ ಹಿಂಡುತ್ತಿದ್ದಾರೆ. ಸದ್ಯ ಈ ಅವ್ಯವಹಾರವನ್ನು ತಡೆಯಲು ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಗೂಂಡಾ ಕಾಯ್ದೆ ಜಾರಿ ಮಾಡುವ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ರಾಜ್ಯಾದ್ಯಂತ ನಕಲಿ ರಸ ಗೊಬ್ಬರ, ಬಿತ್ತನೆ ಬೀಜ ಮಾರಾಟ ಜೋರಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಜೊತೆಗೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನನ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ನಕಲಿ ರಸಗೊಬ್ಬರದ ಬಗ್ಗೆ ದೂರು ಬಂದ ತಕ್ಷಣವೇ ಸಂಬಂಧ ಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಕೇಸ್ ದಾಖಲಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ಈ ರೀತಿಯ ಮಾರಾಟ ಸಂಬಂಧ 149 ಕಂಪನಿಗಳ ಲೈಸನ್ಸ್ ರದ್ದು ಮಾಡಲಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಇಷ್ಟು ಲೈಸನ್ಸ್ ರದ್ದು ಮಾಡಿ ಅಮಾನತು ಮಾಡಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿ.ಸಿ.ಪಾಟೀಲ್ ಹೇಳಿದರು.
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments