1. ಸುದ್ದಿಗಳು

7th pay commission 7ನೇ ವೇತನ ಆಯೋಗ ಅನುಷ್ಠಾನಕ್ಕೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಮಾ. 1ರಿಂದ ಕೆಲಸಕ್ಕೆ ಗೈರು!

Hitesh
Hitesh
Government employees demanding implementation of 7th Pay Commission m. 1 indefinite strike

ಸರ್ಕಾರಿ ನೌಕರರ ನ್ಯಾಯಾಯುತ ಬೇಡಿಕೆಯಾದ ವೇತನ-ಭತ್ಯೆಗೆ ಪರಿಷ್ಕರಣೆ, ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಜರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.  

PMKisanUpdate ಪಿ.ಎಂ ಕಿಸಾನ್‌ ಹಣ ಇದೇ ದಿನ ನಿಮ್ಮ ಖಾತೆಗೆ ಬರಲಿದೆ!

ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದು ಹಾಗೂ ಅಧಿಕಾರಿ, ನೌಕರರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಸೌಲಭ್ಯ

ಚಿಕಿತ್ಸೆ ಪಡೆಯಲು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಲು ಮುಖ್ಯಆಯುಕ್ತ  ತುಷಾರ್ ಗಿರಿನಾಥ್ ಅವರಿಗೆ

ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್‌ ರಾಜ್ ಅವರು ಮನವಿ ಸಲ್ಲಿಸಿದ್ದಾರೆ.

Aadhar Card -Sim Card Link ಸಿಮ್‌ ಕಾರ್ಡ್‌ಗೂ ಆಧಾರ್‌ ಕಾರ್ಡ್‌ ಜೋಡಣೆ: ಕಾರಣ ಏನು ಗೊತ್ತೆ ? 

ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಎಲ್ಲಾ ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಒಮ್ಮತ ತೀರ್ಮಾನದಂತೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ,

ಮಾರ್ಚ್‌ ಒಂದರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಹಣದುಬ್ಬರ ನಿಯಂತ್ರಣಕ್ಕೆ ಮಾಸ್ಟರ್‌ ಪ್ಲಾನ್‌ ಮಾಡ್ತಿದೆ ಕೇಂದ್ರ; ಪೆಟ್ರೋಲ್‌, ಡಿಸೇಲ್‌ ದರ ಇಳಿಕೆ ?!  

ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು,

6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು,

ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40 ರಷ್ಟು ಫಿಟ್‌ಮೆಂಟ್‌ ಸೌಲಭ್ಯವನ್ನು ದಿನಾಂಕ:01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು

ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ.

ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು,

ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

ಹಲವಾರು ವರ್ಷಗಳಿಂದ ಮೇಲ್ಕಂಡ ಸಂಘದ ವತಿಯಿಂದ ನೀಡಿರುವ ಮನವಿ ಪತ್ರ ನೀಡಲಾಗಿದೆ.

ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸಿಲ್ಲ.

ಹೀಗಾಗಿ, ನಮ್ಮ ಸಂಘದ ವತಿಯಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಬೇಕು ಎಂದು ಎ.ಅಮೃತ್ ರಾಜ್  ಅವರು ಆಗ್ರಹಿಸಿದ್ದಾರೆ.

ಶತಮಾನದ ಹಿಂದೆ ಬ್ರಿಟೀಷರು ನೆಟ್ಟಿದ್ದ ಮರ ಲಕ್ಷ ಲಕ್ಷಕ್ಕೆ ಹರಾಜು!

Published On: 26 February 2023, 09:47 AM English Summary: Government employees demanding implementation of 7th Pay Commission m. 1 indefinite strike

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.