ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ (pay commission) ಆಯೋಗ ರಚನೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಮಾಡಿದ್ದಾರೆ.
ಇದನ್ನೂ ಓದಿರಿ: 13.5 ಲಕ್ಷ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಅಸ್ತು!
ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ವೇತನ (pay commission) ಆಯೋಗ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಷಯವನ್ನು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್: 7 ನೇ ವೇತನ ಆಯೋಗ ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಷಯವನ್ನು ತಿಳಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದರು.
7ನೇ ವೇತನ ಆಯೋಗ: ಸೆಪ್ಟೆಂಬರ್ 28ಕ್ಕೆ ಸಂತಸದ ಸುದ್ದಿ..ಸಂಭಾವನೆಯಲ್ಲಿ ಭಾರೀ ಏರಿಕೆ!
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದರು.
ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜತೆ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದರು.
ಈ ಸಂದರ್ಭದಲ್ಲಿ ಎರಡು ದಿನಗಳ ಒಳಗಾಗಿ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದರು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು.
2023ರ ಮಾರ್ಚ್ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾ ಗುವುದು ಎಂದರು.
ರಚನೆ ಮಾಡುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಏಳನೇ ವೇತನ (7th Pay Commission) ಆಯೋಗದ ರಚನೆಗೆ ಸಂಬಂಧಿಸಿದಂತೆ ಇನ್ನು ಎರಡೇ ದಿನಗಳಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಮೊದಲೇ ಅಂದಾಜಿಸಲಾಗಿತ್ತು.
ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ನಿರಂತರವಾಗಿ ಬೇಡಿಕೆ ಇರಿಸಿದ್ದರು.
ಅಲ್ಲದೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗವು ಈ ಹಿಂದೆ ವೇತನ ಪರಿಷ್ಕರಣೆ ಮಾಡುವ ಸಂಬಂಧ ಚರ್ಚೆ ನಡೆಸಿತ್ತು.
ಈಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನಿಯೋಗದೊಂದಿಗೆ ಚರ್ಚೆ ನಡೆಸಿತ್ತು.
ಅಕ್ಟೋಬರ್ ಅಂತ್ಯದ ವೇಳೆಗೆ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಂತ್ರಿಯೂ ತಿಳಿಸಿದ್ದರು.
7ನೇ ವೇತನ ಆಯೋಗ ರಚಿಸುವುದಾಗಿ CM ಬೊಮ್ಮಾಯಿ ಘೋಷಣೆ!
ಏಳನೇ ವೇತನ ಆಯೋಗದ ಶಿಫಾರಸ್ಸಿನಿಂದಾಗಿ 13.5 ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು (government employees),
ನಿಗಮ-ಮಂಡಳಿ, ವಿವಿಧ ಪ್ರಾಧಿಕಾರಿಗಳ ಮೂರು ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ ಏಳನೇ ವೇತನ ಆಯೋಗದ ಶಿಫಾರಸ್ಸು ಅನ್ವಯವಾಗಲಿದೆ.
ಈ ಬದಲಾವಣೆಯಿಂದಾಗಿ ಸರ್ಕಾರವು (state government) ಹೆಚ್ಚುವರಿಯಾಗಿ ಅಂದಾಜು 12,500 ಕೋಟಿ ರೂಪಾಯಿ ವ್ಯಯಿಸಬೇಕಾದ ಸಾಧ್ಯತೆ ಇದೆ.