News

job ಉದ್ಯೋಗ ಹುಡುಕುವವರಿಗೆ ಸರ್ಕಾರದ ಗುಡ್‌ನ್ಯೂಸ್‌!

31 December, 2023 5:15 PM IST By: Hitesh
ರಾಜ್ಯ ಸರ್ಕಾರದಿಂದ ಬಿಗ್‌ ಗುಡ್‌ನ್ಯೂಸ್‌ ..

ರಾಜ್ಯದ ನಿರುದ್ಯೋಗಿಗಳಿಗೆ ಸರ್ಕಾರವು ಜಾಬ್‌ ಗುಡ್‌ನ್ಯೂಸ್‌ (Job Good News) ನೀಡಿದೆ.

ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೆಲಸ ಹುಡುಕುವ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ.

ಆದರೆ, ಇದೇ ಸಂದರ್ಭದಲ್ಲಿ ಕೆಲ್ಸ ಸಿಗ್ತಿಲ್ಲ. ಕೆಲ್ಸ ಸಿಗದೆ ಜನ ಪರದಾಡುವಂತಾಗಿದೆ.

ಕೆಲಸಕ್ಕೆ ಅಪ್ಲಿಕೇಷನ್‌ಗಳು ಬಂದ್ರೂ ಕೆಲಸಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆ ಭಾರೀ ಇದೆ.

ಇದೀಗ ರಾಜ್ಯ ಸರ್ಕಾರವು ಕೆಲಸ ಹುಡುಕುವವರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. 

ಜನವರಿ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಉದ್ಯೋಗ ಮೇಳಕ್ಕೆ ಸಚಿವರ ತಂಡ

ಬೆಂಗಳೂರಿನಲ್ಲಿ (job fair) ಬೃಹತ್‌ ಉದ್ಯೋಗ ಮೇಳ ಆಯೋಜಿಸುವ ಸಂಬಂಧ ಈಗಾಗಲೇ ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ

ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್‌, ಬಿ. ನಾಗೇಂದ್ರ, ಸಂತೋಷ್‌ ಲಾಡ್‌ ಹಾಗೂ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ

ಸಚಿವರ ತಂಡ  ರಚಿಸಲಾಗಿದೆ. ಈ ಸಮಿತಿಯು ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉದ್ಯೋಗ ಮೇಳ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ

ಸಚಿವರ ನೇತೃತ್ವದ ಸಮಿತಿಯು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಲಿದೆ.

ಹೆಚ್ಚು ಕಂಪನಿಗಳು (Prioritize job fair and job creation) ಭಾಗವಹಿಸುವಂತೆ ಮಾಡಲಿದೆ.  

ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸಲಿದೆ.

ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿಸಲು ಇರುವ ಅವಕಾಶಗಳನ್ನು ಸಹ ಶಿಫಾರಸ್ಸು ಮಾಡಲಿದೆ.

ಇದರೊಂದಿಗೆ ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ.

ಸಿ.ಎಂ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ

ಪೂರ್ವಭಾವಿ ಸಭೆ ನಡೆಸಿ, ಚರ್ಚಿಸಲಾಯಿತು.

ಸಭೆಯಲ್ಲಿ ಉದ್ಯೋಗ ಮೇಳದ ಯಶಸ್ವಿ ಆಯೋಜನೆಗಾಗಿ ಆರು ಸಚಿವರನ್ನು ಒಳಗೊಂಡ ಸಮಿತಿ ರಚನೆಗೆ ನಿರ್ಧರಿಸಲಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ,

ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌

ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.