News

5 ಬೃಹತ್ ಉದ್ದಿಮೆಗಳ ಸ್ಥಾಪನೆಗೆ 26,659 ಕೋಟಿ ರೂಪಾಯಿ ಬಂಡವಾಳ ಹೂಡಿಕೆ

24 December, 2020 8:32 AM IST By:
C,M B.S Yadiyurappa

ರಾಜ್ಯದಲ್ಲಿ 26659 ಕೋಟಿ ರೂಪಾಯಿ ಹೂಡಿಕೆಯ ಐದು ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು ಇದರಿಂದ ರಾಜ್ಯದಲ್ಲಿ 13,341 ಉದ್ಯೋಗ ಸೃಷ್ಟಿಯಾಗಲಿದೆ.  

ಹೌದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದಒಪ್ಪಗೆ ನೀಡಿಕೆ ಸಮಿತಿಯಲ್ಲಿರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ, ಪವನ ಶಕ್ತಿ, ಸೌರವಿದ್ಯುತ್‌ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 26,659 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಐದು ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದರಿಂದ ಇದರಿಂದ ರಾಜ್ಯದಲ್ಲಿ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.

ಎಲೆಸ್ಟ್‌ ಪ್ರೈವೆಟ್‌ ಲಿಮಿಟೆಡ್‌ ಕಂಪನಿ ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನಾ ಘಟಕ ಆರಂಭಿಸಲಿದ್ದು, 14,255 ಕೋಟಿ ರು. ಹೂಡಿಕೆ ಮಾಡಲಿದೆ. ಇದರಿಂದ 867 ಉದ್ಯೋಗ ಸೃಷ್ಟಿಯಾಗಲಿದೆ. ಅಂತೆಯೆ ಇದೇ ಕಂಪನಿ ಹುಬ್ಬಳ್ಳಿ-ಧಾರವಾಡದಲ್ಲಿ 6,339 ಕೋಟಿ ರು. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯವಿರುವ ಲೀಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪಿಸಲಿದ್ದು, 1,804 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.