ಕಳೆದ ಒಂದೂವರೆ ವರ್ಷದಿಂದ ಕೊರೋನಾ ವೈರಸ್ ನಿಂದಾಗಿ ಶಿಕ್ಷಣ ವ್ಯವಸ್ಥೆಯೇ ಅತಂತ್ರವಾಗಿದೆ. ಮಕ್ಕಳು ನಾಲ್ಕು ಗೋಡೆಗಳ ಮಧ್ಯೆ ಬಂಧನವಾದಂತಾಗಿದೆ. ಆನ್ಲೈನ್ ಕ್ಲಾಸ್ ನಡೆಯುತ್ತಿದ್ದರೂ ಸಹ ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 23 ರಿಂದ ಶಾಲೆ ತೆರೆಯಲು ಸರ್ಕಾರ ನಿರ್ಧರಿಸಿದೆ.
ಸೋಂಕು ಕಡಿಮೆ ಇರುವ ಕಡೆ ಆಗಸ್ಟ್ 23ರಿಂದ ಶಾಲೆ ಆರಂಭಕ್ಕೆ ಒಂದೂವರೆ ವರ್ಷಗಳ ಬಳಿಕ ಸರ್ಕಾರ ಸಿದ್ದತೆ ನಡೆಸಿದ್ದು, ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ. ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇರುವ ಕಡೆ 9 ರಿಂದ ದ್ವಿತೀಯ ಪಿಯುಸಿ ವರೆಗೆ ಶಾಲೆ- ಕಾಲೇಜು ಆರಂಭ ಮಾಡುವಂತೆ ಸೂಚಿಸಿದ್ದು, ಶಾಲಾ -ಕಾಲೇಜುಗಳು ಸರ್ಕಾರ ಪ್ರಕಟಿಸಿರುವ ಈ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯವಾಗಿದೆ. ಕಳೆದೊಂದು ವರ್ಷದ ಬಳಿಕ ಭೌತಿಕವಾಗಿ ಶಾಲೆ ಆರಂಭಕ್ಕೆ ಮುಂದಾಗುತ್ತಿರುವುದರಿಂದ, ಶಾಲಾ ಪ್ರಾರಂಭಕ್ಕೆ ಮುನ್ನ ಒಂದು ವಾರ ಕಡ್ಡಾಯವಾಗಿ ಶಾಲೆಯನ್ನು ಸಂಪೂರ್ಣವಾಗಿ ಸ್ವಚ್ಛ ಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ 1 ರಿಂದ 10ನೇ ತರಗತಿಗಳಿಗೆ ಪರ್ಯಾಯ ವಿಧಾನದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆಗಳನ್ನು ಮುಂದುವರೆಸಲು ತಿಳಸಲಾಗಿದೆ.
ಮಾರ್ಗಸೂಚಿ ವಿವರ
ಶೇ.2ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಜಿಲ್ಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ದಿನಾಂಕ 23-08-2021ರಿಂದ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸುವುದು. ಶಾಲೆ ಪ್ರಾರಂಭಿಸಲು ನಿಗಧಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಢಾಯವಾಗಿ ಪೋಷಕರಿಂದ ಅನುಮತಿ ಪತ್ರದ ಜೊತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರವನ್ನು ತರಬೇಕು. 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವುದು
ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡುವುದು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಒಂದು ಕೊಠಡಿಗೆ ಕೇವಲ 20 ಮಕ್ಕಳಿಗೆ ಮಾತ್ರ ಕೂರಲು ಅವಕಾಶ. ಜೊತೆಗೆ ಒಂದು ಬೆಂಚ್ನಲ್ಲಿ ಒಂದೇ ಮಗುವಿಗೆ ಕೂರಲು ಅವಕಾಶ ನೀಡಬೇಕು. 9 ಮತ್ತು 10ನೇ ತರಗತಿಯ ಭೌತಿಕ ತರಗತಿಗಳನ್ನು ಬೆಳಗಿನ ಅವಧಿ ಮಾತ್ರ ನಡೆಸಬೇಕು
ಮಕ್ಕಳು ಶಾಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಕ್ಕಳು ಶಾಲೆ ಆವರಣ ಪ್ರವೇಶಿಸುತ್ತಿದ್ದಂತೆ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈ ಸ್ವಚ್ಛಕ್ಕೆ ಅವಕಾಶ ನೀಡಬೇಕು. ಥರ್ಮಲ್ ಸ್ಕ್ಯಾನರ್ನಿಂದ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಬೇಕು.
ಶಾಲೆಗೆ ಆಗಮಿಸುವ ಮತ್ತು ನಿರ್ಗಮಿಸುವ ವೇಳೆ ದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳ ದಿನನಿತ್ದ ಆರೋಗ್ಯದ ಸ್ಥಿತಿ ವಿವರ ಪಡೆಯಬೇಕು. ಯಾವುದೇ ವಿದ್ಯಾರ್ಥಿಗೆ ಕೆಮ್ಮು, ಜ್ವರ, ನೆಗಡಿ, ಮೂಗು ಸೋರಿಕೆ ಕಂಡು ಬಂದರೆ, ಐಸೋಲೇಷನ್ನಲ್ಲಿ ತಾತ್ಕಾಲಿಕವಾಗಿ ಇರಿಸಿ ಬಳಿಕ ಪೋಷಕರು ಸಂಪರ್ಕಿಸಿ ಮನೆಗೆ ಕಳುಹಿಸಬೇಕು.
ವಿದ್ಯಾರ್ಥಿಗಳು ಮನೆಯಿಂದಲೇ ನೀರು ಮತ್ತು ಆಹಾರ ತರುವಂತೆ ಸೀಚಿಸಬೇಕು. ಜೊತೆಗೆ ಅವಶ್ಯಕತೆ ಇದ್ದಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಒಳಾಂಗಡ ಕ್ರೀಡಾಗಂಣದಲ್ಲಿ ಶುಚಿತ್ವದ ಜೊತೆ ಸಾಮಾಜಿಕ ಅಂತರ ಕಾಪಾಡುವುದು ಅಗತ್ಯ.ವಿದ್ಯಾರ್ಥಿಗಳು ತಮ್ಮ ನಡುವೆ ವಸ್ತುಗಳನ್ನು ಪರಸ್ಪರ ವಿನಿಮಯ ಮಾಡದಂತೆ ನೋಡಿಕೊಳ್ಳಬೇಕು. ಶಾಲೆಗೆ ಹಾಜರಾಗುವ ಶಿಕ್ಷಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಜೊತೆಗೆ ಕರ್ತವ್ಯಕ್ಕೆ ಹಾಜರಾಗುವ ಮೂರು ದಿನ ಮುಂಚಿತ ಆರ್ಟಿಪಿಸಿಆರ್ ನೆಗೆಟಿವ್ ವರದಿ ಸಲ್ಲಿಸಬೇಕು
Share your comments