News

ಮಹಾತ್ಮಗಾಂಧಿ ನರೇಗಾ ಕೂಲಿ; ಏಪ್ರೀಲ್‌ 1ರಿಂದ 316 ರೂ.ಗೆ ಹೆಚ್ಚಳ

30 March, 2023 1:50 PM IST By: Maltesh
Govt hikes wages under MGNREGA scheme from April

ಬಳ್ಳಾರಿ: ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ ಕೂಲಿ ರೂ.309 ಗಳಿಂದ ರೂ.316 ಗಳಿಗೆ ಪರಿಷ್ಕರಿಸಿ 2023-24ನೇ ಸಾಲಿಗೆ ಆರ್ಥಿಕ ವರ್ಷ ಏಪ್ರೀಲ್ 1 ರಿಂದ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.

ಅಕ್ರಮ ಸಕ್ರಮ ಯೋಜನೆ: ಮೇ 31 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೂಲಿ ಕೆಲಸ ನೀಡಲಾಗುವುದು ಮತ್ತು ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮಪಂಚಾಯಿತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲಿಯೇ ಪಡೆದುಕೊಳ್ಳಬಹುದಾಗಿದೆ.

ದೊರಕುವ ಸೌಲಭ್ಯಗಳು:* ನಮೂನೆ-1ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಜೊತೆಗೆ ಪಾಸ್‍ಪೋರ್ಟ್‌ ಅಳತೆಯ ಫೋಟೋ, ಆಧಾರ್‍ಕಾರ್ಡ್, ರೇಷನ್‍ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು. ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇರುತ್ತದೆ.

ಈ ದಿನದ ಅಚ್ಚರಿ: ಅಬ್ಬಬ್ಬಾ! 37 ವರ್ಷದ ಹಿಂದೆ ರಾಯಲ್‌ ಎನ್‌ಫಿಲ್ಡ್‌ ರೇಟ್‌ ಎಷ್ಟಿತ್ತು ಗೊತ್ತಾ..?

ಕಾಮಗಾರಿ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭೀಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯವರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಿದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇದೆ. ಯೋಜನೆಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.