ಗ್ರಾಮ ಒನ್‌ನ ಫಲಾನುಭವಿಗಳ ಸಂಖ್ಯೆ ಒಂದು ಕೋಟಿಗೂ ಮೀರಿದೆ. ಇದರ ಲಾಭವೇನು, ನಿಮಗೂ ಸಹಾಯವಾಗಲಿದೆ ಈ ಲೇಖನ….
ಇದನ್ನೂ ಓದಿರಿ: Farmers Helpline: ರೈತರ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭ!
ಗ್ರಾಮೀಣ ಭಾಗದ ಜನರಿಗೆ ಒಂದೇ ಸೂರಿನಡಿ ಹಲವು ಸೇವೆಗಳನ್ನು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಾರಂಭಿಸಿದ ಗ್ರಾಮ ಒನ್‌ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯ ಸರ್ಕಾರವು ಗ್ರಾಮೀಣ ಜನರಿಗೆ ವಿವಿಧ ಸೇವೆಗಳನ್ನು ಮನೆ ಬಾಗಿಲಿಗೆ ಸಕಾಲದಲ್ಲಿ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಯೋಜನೆಯನ್ನು ಪ್ರಾರಂಭಿಸಿತ್ತು.
ಇದೀಗ ಈ ಯೋಜನೆಯ ಫಲಾನುಭವಿಗಳ ಸಂಖ್ಯೆಯು ಅಲ್ಪಾವಧಿಯಲ್ಲಿ ಅಂದರೆ, ಕೇವಲ ಒಂಬತ್ತು ತಿಂಗಳಲ್ಲಿ ಒಂದು ಕೋಟಿ ದಾಟಿದೆ.
ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರ ಮನೆ ಬಾಗಿಲಿಗೆ ವಿವಿಧ ಸೇವೆಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶ.
ಸೇವಾಸಿಂಧು ಯೋಜನೆಯಡಿ ರೂಪಿಸಲಾಗಿರುವ 800 ಸೇವೆಗಳ ಜೊತೆ ಆಧಾರ್, ಪಾನ್ ಕಾರ್ಡ್, ಬ್ಯಾಂಕಿಂಗ್, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಇ- ಸ್ಟ್ಯಾಂಪ್ ಮತ್ತಿತರ ಸೇವೆಗಳನ್ನೂ ನೀಡಲಾಗುತ್ತಿದೆ.
ಗುಡ್‌ನ್ಯೂಸ್: ಪ್ರಧಾನಿ ಮೋದಿಯಿಂದ ಯುವಕರಿಗೆ ಭರ್ಜರಿ ಉಡುಗೊರೆ, 10 ಲಕ್ಷ ಸಿಬ್ಬಂದಿ ನೇಮಕಾತಿ!
ಗ್ರಾಮೀಣರಿಗೆ ಸರ್ಕಾರದ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡುವುದು ಈ ಯೋಜನೆಯ ಮೂಲ ಉದ್ದೇಶ.
ನಾಗರಿಕ ಕೇಂದ್ರಿತ ಎಲ್ಲ ಸೇವೆಗಳನ್ನು ನೀಡುವ ಚಟುವಟಿಕೆಗೆ ಏಕ- ಗವಾಕ್ಷಿ ಕೇಂದ್ರವಾಗಿ ಈ ಯೋಜನೆಯನ್ನು ಸೃಜಿಸಲಾಗಿದ್ದು, ಎಲ್ಲ 31 ಜಿಲ್ಲೆಗಳಲ್ಲಿಯೂ ಅಭೂತಪೂರ್ವ ಯಶಸ್ಸು ಎನ್ನುತ್ತಾರೆ ಯೋಜನೆಯ ಯೋಜನಾ ನಿರ್ದೇಶಕ ಬಿ.ಎನ್. ವರಪ್ರಸಾದ್ ರೆಡ್ಡಿ ತಿಳಿಸಿದ್ದಾರೆ.
ಸದ್ಯ 7,112 ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸುತ್ತಿವೆ.
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದು ಕೇಂದ್ರ ಇರಬೇಕೆಂಬ ಕಾರಣಕ್ಕೆ ಇನ್ನೂ 1,600 ಕೇಂದ್ರಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ.
ಮಧ್ಯವರ್ತಿಗಳ ಹಾವಳಿಯಿಂದ ನಾಗರಿಕರನ್ನು ಮುಕ್ತಗೊಳಿಸುವ ಜೊತೆಗೆ, ಗುಣಮಟ್ಟದ ಸೇವೆಯನ್ನು ನಿಗದಿತ ಸಮಯದಲ್ಲಿ ಇಲ್ಲಿ ನೀಡಲಾಗುತ್ತಿದೆ’ ಎಂದೂ ಅವರು ಹೇಳಿದ್ದಾರೆ.
ಉದ್ಯೋಗ ಮೇಳ; 75 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ !
ಗ್ರಾಮ ಒನ್ ಕೇಂದ್ರ ಬಗ್ಗೆ ಒಂದಿಷ್ಟು
ಗ್ರಾಮ-ಒನ್ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಸಿಂಧು ಯೋಜನೆಯಡಿಯಲ್ಲಿ
ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಅದೇ ರೀತಿ ಸಕಾಲ, ಮಾಹಿತಿ ಹಕ್ಕು ಅಧಿನಿಯಮ , ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸಹ ಸ್ವೀಕರಿಸಲಾಗುವುದು.
ಗ್ರಾಮ-ಒನ್ ಅನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರು ಎಫ್‌ವೈ 20-21ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ಸಂಜೆ 8 ರವರೆಗೆ ಕಾರ್ಯನಿರ್ವಹಿಸಲಿವೆ.
ಇದನ್ನೂ ಓದಿರಿ: ಮೀನುಗಾರರಿಗೆ ಭರ್ಜರಿ ಸುದ್ದಿ ನೀಡಿದ ಸಿಎಂ, 3 ಲಕ್ಷ ಸಹಾಯಧನ ಘೋಷಣೆ!
ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು
- ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ,ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
- ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದಾಗಿದೆ .
- ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು.
- ಮಧ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.
ಗ್ರಾಮ ಒನ್ ಬಗ್ಗೆ ಇನ್ನಷ್ಟು ಮಾಹಿತಿಗೆ https://sevasindhu.karnataka.gov.in/gramaone/about_kan.html ಸರ್ಕಾರದ ಅಧಿಕೃತ ವೆಬ್‌ಸೈಟ್.