ರಾಜ್ಯದ ಕುರಿಗಾಹಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ತಲಾ ಇಪ್ಪತ್ತು ಕುರಿಗಳನ್ನು ಮತ್ತು ಮೇಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನಷ್ಟು ಓದಿರಿ: ಗಮನಿಸಿ: ಕಳೆ ಅವಶೇಷ ಸುಡುವ ರೈತರಿಗೆ ಪಿಎಂ ಕಿಸಾನ್ ಸಬ್ಸಿಡಿ ರದ್ದು, ₹5000 ದಂಡ!
ಪ್ರತಿಯೊಬ್ಬ ಕುರಿಗಾರರಿಗು ಇಪ್ಪತ್ತು ಕುರಿ, ಒಂದು ಮೇಕೆಯನ್ನು ನೀಡುವ ಮೂಲಕ ಕುರಿಗಾರರ ಕುಟುಂಬ ಸ್ವಾವಲಂಬಿ ಬದುಕು ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮುಂದಿನ ತಿಂಗಳಿನಿಂದಲೇ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ. ಇದಕ್ಕಾಗಿ 5324 ಕೋಟಿ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Breaking: ಬರೋಬ್ಬರಿ 10 ಲಕ್ಷ ಜನರ ಪಡಿತರ ಚೀಟಿ ರದ್ದು ಮಾಡಿದ ಸರ್ಕಾರ! ಯಾಕೆ ಗೊತ್ತೆ?
ಯುವಕರು, ಬಡವರು, ರೈತರ ಪರವಾಗಿ ಕೆಲಸ ಮಾಡುವ ತಾಕತ್ತು, ದಮ್ ಯಾರಿಗಾದರೂ ಇದ್ದರೆ ಅದು ನಮ್ಮ ಸರ್ಕಾರಕ್ಕೆ ಮಾತ್ರ ಎಂದು ಹೇಳಿದ್ದಾರೆ.
ಜನಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಘೋಷಣೆ ಉದ್ಘಾಟಿಸಿ ಅವರು ಮಾತನಾಡಿದರು.
ರೈತರ ಕಬ್ಬು ಬಾಕಿ ಹಣ ಶೀಘ್ರ ಪಾವತಿ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರ ಸೂಚನೆ!
ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕುರಿಗಾರರಿದ್ದಾರೆ. ಅವರಿಗೆ ಒಂದು ಒಳ್ಳೆಯ ಸುದ್ದಿಯನ್ನು ನಾನು ಕೊಡುತ್ತಿದ್ದೇನೆ.
ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ, ಒಂದು ಮೇಕೆಯನ್ನು ನೀಡುವ ಯೋಜನೆಯನ್ನು ಮುಂಬರುವ ತಿಂಗಳಿನಿಂದ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
Dearness Allowance: ಡಿಎ ಬಾಕಿ ಕುರಿತಂತೆ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಅಂದಾಜು ₹12,500 ಕೋಟಿ ಮೀಸಲು ಸಾಧ್ಯತೆ!
ಕುರಿಗಾರರ ಕುಟುಂಬವನ್ನು ಸ್ವಾವಲಂಬಿ ಬದುಕು ನಡೆಸಲು ಈ ಯೋಜನೆ ಜಾರಿಗೆ ತರುತ್ತಿದ್ದೇವೆ. ಇದಕ್ಕಾಗಿ 2324 ಕೋಟಿ ಮೀಸಲಿಟ್ಟಿದ್ದೇವೆ. ಇದನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ.
ಹಿಂದುಳಿದವರ, ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನಿಮಗೆ ಯಾಕೆ ಇದು ಹೊಳೆಯಲಿಲ್ಲ. ಸಿದ್ರಾಮಣ್ಣ? ಕುರಿಗಾರರು ಬಿಸಿಲು, ಮಳೆಯಲ್ಲಿ ಸಿಕ್ಕಿಕೊಂಡು ಬದುಕು ಕಷ್ಟವಾಗಿದೆ.
ಅವರಿಗೆ ಸಹಾಯ ಮಾಡುವ ಕನಿಷ್ಠ ವಿಚಾರ ನಿಮ್ಮ ತಲೆಗೆ ಬರಲಿಲ್ಲ. ಈಗ ನಾವು ಮಾಡುತ್ತಿದ್ದೇವೆ, ಸಾಮಾಜಿಕ ನ್ಯಾಯ ಭಾಷಣದಿಂದ ಬರುವುದಿಲ್ಲ ಎಂದು ಹೇಳಿದರು.