News

#Scholarship ವಿದ್ಯಾರ್ಥಿಗಳಿಗೆ ಇಲ್ಲಿದೆ 20,000 ದಿಂದ 35,000 ಭರ್ಜರಿ ಪ್ರೋತ್ಸಾಹಧನ ..ಅರ್ಜಿ ಸಲ್ಲಿಕೆ ಹೇಗೆ?

16 September, 2022 10:39 AM IST By: Kalmesh T
Great news for students; Here is 20,000 to 35,000 Prize Money..How to Apply?

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ದೊರೆಯಲಿದೆ 20 ಸಾವಿರದಿಂದ 35 ಸಾವಿರ ವರೆಗೆ ಪ್ರೋತ್ಸಾಹಧನ. ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ 

ಇದನ್ನೂ ಓದಿರಿ: ಗುಡ್‌ನ್ಯೂಸ್‌: ಕೃಷಿ ಭೂಮಿ ಒತ್ತುವರಿಗೆ ಭೂಕಬಳಿಕೆ ಕ್ರಿಮಿನಲ್‌ ಕೇಸ್‌ ದಾಖಲಿಸುವಂತಿಲ್ಲ!

2021-22ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕಾಗಿ (Prize Money) ಆನ್‌ ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Prize Money : ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ sw.kar.nic.in  ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

 IMD: ಭಾರತೀಯ ಹವಾಮಾನ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; ತಿಂಗಳಿಗೆ ರೂ.78,000 ವೇತನ!

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ (How to apply)

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ.

ಮುಖಪುಟದಲ್ಲಿ ಮೆಟ್ರಿಕ್ ನಂತರ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಲಿಂಕ್ ಮೇಲೆ ಕ್ಲಿಕ್‌ ಮಾಡಿ.

ಆಗ ನಿಮಗೆ ಇನ್ನೊಂದು ಪುಟ ತೆರೆದುಕೊಳ್ಳುತ್ತದೆ.

ಪಶುಗಳಿಗೆ ಸಮರ್ಪಕ ಮೇವು ಲಭ್ಯತೆಗೆ ಒತ್ತು; ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಆ ಪುಟದಲ್ಲಿ ಆನ್‌ಲೈನ್‌ ಅರ್ಜಿ ಲಿಂಕ್‌ ಮೇಲೆ ಕ್ಲಿಕ್ ಮಾಡಿ.

ನಂತರ ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಂಕಪಟ್ಟಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ, ಫೋಟೋಗಳನ್ನು ಅಪ್‌ ಲೋಡ್‌ ಮಾಡಿ.

ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ಔಟ್‌ ತೆಗೆದುಕೊಳ್ಳಿ.

ಯುವಜನತೆಗೆ ಉದ್ಯೋಗ ಮಾಡಲು ಇಲ್ಲಿದೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಲಕ್ಷ ಸಾಲ..ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಕೋರ್ಸ್‌ ಅನುಸಾರ ಪ್ರೋತ್ಸಾಹಧನದ ವಿವರ

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ - 20,000

ಪದವಿ ವಿದ್ಯಾರ್ಥಿಗಳಿಗೆ - 25,000

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ - 30,000

ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ - 35,000

ಅರ್ಜಿ ಸಲ್ಲಿಸಲು ಅಕ್ಟೊಬರ್ 31, 2022 ಕೊನೆಯ ದಿನವಾಗಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.