News

ಯುವಜನತೆಗೆ ಭರ್ಜರಿ ಸುದ್ದಿ: 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿ, 5 ಲಕ್ಷ ಕೋಟಿ ಬಂಡವಾಳ ಹೂಡಿಕೆ!

02 November, 2022 10:34 AM IST By: Kalmesh T
Great news for the youth: Job creation for 5 lakh people, investment of 5 lakh crore!

ರಾಜ್ಯದಲ್ಲಿ 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುವ ಮೂಲಕ 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ನಿರೀಕ್ಷೆಯೊಂದಿಗೆ ಜಾಗತಿಕ ಬಂಡವಾಳ ಸಮಾವೇಶ ಹಮ್ಮಿಕೊಳ್ಳಲಾಗಿದೆ.

RBI ನಿಂದ ನವೆಂಬರ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿ ಬಿಡುಗಡೆ; ಒಟ್ಟು 20 ದಿನ ಬಂದ್‌ ಇರಲಿವೆ ಈ ಬ್ಯಾಂಕ್‌ಗಳು!

ರಾಜ್ಯದಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಮೂಲಕ 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ನಿರೀಕ್ಷೆಯೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರದಿಂದ 3 ದಿನಗಳ ಕಾಲ ‘ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ’ (Global Capital Investors Conference) ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ವಿಧಾನದ ಮೂಲಕ ಸಮಾವೇಶ ಉದ್ಘಾಟಿಸಲಿದ್ದಾರೆ.

‘ಬಿಲ್ಡ್‌ ಫಾರ್‌ ದಿ ವಲ್ಡ್‌’ (Build for the world) ಪರಿಕಲ್ಪನೆಯೊಂದಿಗೆ ನಡೆಯುವ ಸಮಾವೇಶವನ್ನು ನವೆಂಬರ್‌ 2ರಂದು ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಲಿದ್ದಾರೆ.

ಈ ಸಮಯದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಪ್ರಹ್ಲಾದ್‌ ಜೋಶಿ, ರಾಜೀವ್‌ ಚಂದ್ರಶೇಖರ್‌, ರಾಜ್ಯದ ಸಚಿವರು ಭಾಗಿಯಾಗಲಿದ್ದಾರೆ’ ಎಂದು ಸಮಾವೇಶದ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ.

Milk Price: ಹಾಲು ಉತ್ಪಾದಕರಿಗೆ ಸಿಹಿಸುದ್ದಿ; ನವೆಂಬರ್‌ 1ರಿಂದ ಲೀಟರ್‌ಗೆ 2ರೂ ಹೆಚ್ಚಳ!

60 ಕಂಪನಿಗಳ ಜತೆ ಒಪ್ಪಂದ:

ಈ ಸಮಾವೇಶದಲ್ಲಿ ಸುಮಾರು 60 ಕಂಪನಿಗಳ ಉದ್ಯಮದಾರರ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಖ್ಯಮಂತ್ರಿಯವರು ಉದ್ದಿಮೆದಾರರ ಜೊತೆ ಮುಖಾಮುಖಿಯಾಗಿ ಮಾತನಾಡಲಿದ್ದಾರೆ.

ಇದರ ಜೊತೆ ದೇಶ-ವಿದೇಶಗಳ ತಜ್ಞರಿಂದ ವಿವಿಧ ವಲಯಗಳ ಕುರಿತು ಚರ್ಚೆಗಳು ನಡೆಯಲಿವೆ. ಇದೇ ವೇಳೆ ಕೈಗಾರಿಕೆಗೆ ಸಂಬಂಧಿಸಿದ 5 ನಿಮಿಷಗಳ ವಿಡಿಯೋ ಕೂಡಾ ಲೋಕಾರ್ಪಣೆ ಮಾಡಲಾಗುವುದು.

ಸಮಾವೇಶಕ್ಕೆ ಸುಮಾರು 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಸಚಿವ ಮುರುಗೇಶ್‌ ನಿರಾಣಿ ಮಾಹಿತಿ ನೀಡಿದರು.

10ನೇ ತರಗತಿ ಪಾಸಾಗಿದ್ದರೇ ಸಾಕು KMF ನಲ್ಲಿವೆ ಉದ್ಯೋಗಾವಕಾಶ; ರೂ.97100 ಸಂಬಳ!

‘ಸಮಾವೇಶದಲ್ಲಿ ದೇಶ ವಿದೇಶಗಳ ಅನೇಕ ಕೈಗಾರಿಕೋದ್ಯಮಿಗಳು, ಬಹುರಾಷ್ಟ್ರೀಯ ಕಂಪನಿಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ ಆ್ಯಂಡ್‌ ಡಿ) ಸಂಸ್ಥೆಗಳು, ಸ್ಟಾರ್ಚ್‌ಅಪ್‌ ವಲಯದ ಬಂಡವಾಳ ಹೂಡಿಕೆಯಿಂದ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ.

ಸಮಾವೇಶದಲ್ಲಿ ಸೋಲಾರ್‌, ಗ್ರೀನ್‌ ಹೈಡ್ರೋಜನ್‌ ಸೇರಿ ‘ಗ್ರೀನ್‌ ಎನರ್ಜಿ’ (ಹಸಿರು ಇಂಧನ) ಕ್ಷೇತ್ರದಲ್ಲೇ ಸುಮಾರು 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ನಿರೀಕ್ಷೆ ಮಾಡಲಾಗಿದೆ. ಈ ಪೈಕಿ ರಾಜ್ಯದ ಜಿಂದಾಲ್‌ ಸಂಸ್ಥೆಯೇ 40 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ನಿರೀಕ್ಷೆ ಇದೆ’ ಎಂದರು.

‘ನಿರೀಕ್ಷಿಸಿರುವ ಶೇ.90ರಷ್ಟು ಹೂಡಿಕೆ ಬಿಯಾಂಡ್‌ ಬೆಂಗಳೂರು (ಬೆಂಗಳೂರು ಹೊರತಾದ ರಾಜ್ಯದ ಇತರ ಭಾಗ) ಭಾಗದಲ್ಲಿಯೇ ಹೂಡಿಕೆಯಾಗಲಿದೆ. ಇದರಿಂದ ಹೊಸ ಉದ್ಯೋಗಾವಕಾಶಗಳು ಬೆಂಗಳೂರಿನಿಂದ ಹೊರಗೆ ಸೃಷ್ಟಿಯಾಗಲಿವೆ’ ಎಂದು ಹರ್ಷಿಸಿದರು.

'Water Heroes: Share Your Stories’ ಸ್ಪರ್ಧೆಗೆ ಅರ್ಜಿ ಆಹ್ವಾನ; ನೀವೂ ನಿಮ್ಮ ಕಥೆ ಹಂಚಿಕೊಂಡು ರೂ.10,000 ಗೆಲ್ಲಬಹುದು!

ನ.4ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ. ಸಮಾವೇಶದ ಕೊನೆಯ ದಿನ ಹೂಡಿಕೆ ಮತ್ತು ಒಡಂಬಡಿಕೆಗಳ ಪೂರ್ಣ ಮಾಹಿತಿ ದೊರೆಯಲಿದೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚಿನ ಸಂಶೋಧನಾ ಮತ್ತು ಅಭಿವೃದ್ಧಿ (ಆರ್‌ ಆ್ಯಂಡ್‌ ಡಿ)ಕೇಂದ್ರಗಳು, 5 ಸಾವಿರಕ್ಕೂ ಹೆಚ್ಚಿನ ನವೋದ್ಯಮ, ನೂತನ ಕೈಗಾರಿಕಾ ನೀತಿ, ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವು ಕಾರಣಗಳಿಂದ ಕರ್ನಾಟಕವು ಹೂಡಿಕೆ ಸ್ನೇಹಿ ರಾಜ್ಯವಾಗಿ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ.