News

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ‘ಗ್ರೀನ್ ಅಂಬಾಸಿಡರ್ʼ ಗೌರವ: ಸಚಿವ ಸ್ಥಾನಮಾನ ನೀಡುವುದಾಗಿ ಸಿಎಂ ಭರವಸೆ!

01 July, 2022 11:18 AM IST By: Kalmesh T
Green Ambassadorʼs tribute to saalumarada Thimakka

111 ವರ್ಷ ಸಂಭ್ರಮದಲ್ಲಿರುವ ಸಾಲುಮರದ ತಿಮ್ಮಕ್ಕ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿ ‘ಗ್ರೀನ್ ಅಂಬಾಸಿಡರ್ಗೌರವ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿರಿ: ಭಾರತದಿಂದ 180,000 ಟನ್ ಗೋಧಿಯನ್ನು ಖರೀದಿಸಲಿದೆ ಈಜಿಪ್ಟ್!

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ (Saalumarada Thimmakka) ಅವರಿಗೆ ತಮ್ಮ 111ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಉನ್ನತ ಹುದ್ದೆ ನೀಡಿ ಗೌರವಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಾಲುಮರದ ತಿಮ್ಮಕ್ಕ ಇಂಟರ ನ್ಯಾಷನಲ್ ಫೌಂಡೇಶನ್ ಸಂಸ್ಥೆ ವತಿಯಿಂದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಶಾಲು ಹಾಕಿ, ಕೈಗೆ ಕಡಗ ತೊಡಿಸಿ ಸನ್ನಾನಿಸಿದ್ದಾರೆ.

13 ಕೋಟಿ ರೈತರಿಗೆ ಸಿಹಿಸುದ್ದಿ: ₹2516 ಕೋಟಿ ಬಜೆಟ್ ಹಂಚಿಕೆ, 63,000 ಕೃಷಿ ಪತ್ತಿನ ಸಹಕಾರ ಸಂಘಗಳ ಕಂಪ್ಯೂಟರೀಕರಣ!

ಇನ್ನು ಸಮಾರಂಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ‘ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ ಎಂದರು.

ತಿಮ್ಮಕ್ಕನವರ ಸೇವೆಯನ್ನು ಈ ನಾಡು ಎಂದಿಗೂ ಮರೆಯಲಾರದು ಎಂದು ಪ್ರಶಂಸಿಸಿದ್ದಾರೆ. 

ಕಾಯಕ ನಿಷ್ಠೆ ಮಾಡಿಕೊಂಡು ಸರ್ವರಿಗೂ ಒಳಿತು ಮಾಡುವ ಕೆಲಸ ಮಾಡಿದರೆ ಇಡೀ ಜಗತ್ತಿನಲ್ಲಿ ಬದಲಾವಣೆ ಮಾಡುವ ಪ್ರಭಾವಿಶಕ್ತಿ ಆಗಬಹುದು ಎಂಬುದಕ್ಕೆ ನಮ್ಮ ಕರ್ನಾಟಕದಲ್ಲಿ ನಮ್ಮ ನಡುವೆ ಇರುವ ಸಾಲುಮರದ ತಿಮ್ಮಕ್ಕನವರು ಉದಾಹರಣೆ ಎಂದರು.

#ಇಂದು-ನಾಳೆ ಕರ್ನಾಟಕದಲ್ಲಿ ಗುಡುಗು ಸಹಿತ ಭಾರೀ ಮಳೆ ಎಚ್ಚರಿಕೆ..! 

ಜೀವನದಲ್ಲಿ ಎರಡು ಕೆಲಸ ಬಹಳ ಕಠಿಣ. ಹುಟ್ಟಿದಾಗ ಮುಗ್ಧತೆಯಿಂದ ಇರುತ್ತೇವೆ. ಮುಂದೆ ಮುಗ್ಧತೆಯನ್ನು ಕಳೆದುಕೊಳ್ಳುತ್ತೇವೆ. ಮುಗ್ಧತೆಯನ್ನು ಕೊನೆವರೆಗೂ ಇಟ್ಟುಕೊಳ್ಳುವುದು ಬಹಳ ಕಠಿಣ.

ಸದಾ ಕಾಲ ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಕಠಿಣ. ಸಾಲು ಮರದ ತಿಮ್ಮಕ್ಕ ಅಜ್ಜಿ ಅವರ ಮುಖದಲ್ಲಿ ಮಗುವಿನ ಮುಗ್ಧತೆ ಇದೆ.

ಅದು ಅವರ ಪ್ರಾಂಜಲವಾದ ಮನಸ್ಸು, ಶುದ್ಧ ಅಂತಃಕರಣದಿಂದ ಮಾಡಿರುವ ಕಾಯಕಯೋಗಿ. ಹೀಗಾಗಿ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸಾಲುಮರದ ತಿಮ್ಮಕ್ಕ ಅವರನ್ನು ಹೊಗಳಿದ್ದಾರೆ.