News

Gruha Jyothi Registration | 2 ದಿನದಲ್ಲಿ 1,61,958 ಗ್ರಾಹಕರ ನೋಂದಣಿ : ಇವಿಷ್ಟು ಮಾಹಿತಿ ನೀಡಿ ಉಚಿತ ವಿದ್ಯುತ್‌ ಪಡೆಯಿರಿ

20 June, 2023 4:15 PM IST By: Kalmesh T
Gruha Jyothi scheme Registration : 1,61,958 Registration in 2 Days!

Gruha Jyothi scheme Registration: ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯ ನೋಂದಣಿ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸಂಜೆ 5.30 ಗಂಟೆಯವರೆಗೆ ಒಟ್ಟು 1,61,958 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಬೆಸ್ಕಾಂ ತಿಳಿಸಿದೆ.

how to apply for gruha jyothi schemeರಾಜ್ಯ ಸರಕಾರ ಜಾರಿಗೆ ತಂದಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ (200 units Free electricity) ನೀಡುವ ಗೃಹ ಜ್ಯೋತಿ ಯೋಜನೆಯ ನೋಂದಣಿ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸಂಜೆ 5.30 ಗಂಟೆಯವರೆಗೆ ಒಟ್ಟು 1,61,958 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ನೋಂದಣಿ ನಿರಾತಂಕವಾಗಿ ನಡೆಯಿತು. ಈ ಸಂಖ್ಯೆ ಸೋಮವಾರ ದುಪ್ಪಟ್ಟುಗೊಂಡಿದ್ದು, 1,06,958 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಇದು ಗ್ರಾಹಕರ ಉತ್ಸಾಹವನ್ನು ತೋರಿಸುತ್ತದೆ. ನೋಂದಣಿ ಪ್ರಕ್ರೀಯೆ ಅತ್ಯಂತ ಸರಳೀಕರಣವಾಗಿದ್ದು, ಗ್ರಾಹಕರು ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ.

ಕೇವಲ ವಿದ್ಯುತ್ ಬಿಲ್‌'ನಲ್ಲಿರುವ ಖಾತೆ ಸಂಖ್ಯೆ, ಗ್ರಾಹಕರ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನಷ್ಟೇ ನಮೂದಿಸಿದರೆ ಸಾಕು.

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in  RR ROO ಮಾಡಲಾಗುತ್ತಿದೆ.

ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ನಿಗದಿಪಡಿಸಲಾಗಿಲ್ಲ, ಆದ್ದರಿಂದ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ.

ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ: ಡಿ.ಕೆ.ಶಿವಕುಮಾರ್‌

ಗೃಹ ಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ.

ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್‌ ಬಿಲ್‌ ಬರುವುದಿಲ್ಲ. ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು.

ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಅರ್ಜಿ ನೋಂದಾಯಿಸಲು ಯಾವ ಯಾವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು?

ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಅರ್ಜಿ ನೋಂದಣಿ ಸಮಯದಲ್ಲಿ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ವಿದ್ಯುತ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ತಮ್ಮ ದೂರವಾಣಿ ವಿವರಗಳನ್ನು ನಮೂದಿಸಿದರೆ ಸಾಕು.

ರೈತ ಸಿರಿ ಯೋಜನೆ ಎಂದರೇನು? ಈ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ ಸಿಗುವ ಪ್ರೋತ್ಸಾಹ ಧನ ಎಷ್ಟು? ಇಲ್ಲಿದೆ ಮಾಹಿತಿ