News

Gruha Jyoti ಗೃಹಜ್ಯೋತಿಯಿಂದ ಬರೋಬ್ಬರಿ ಇಷ್ಟು ಜನರಿಗೆ ಲಾಭ!

17 January, 2024 6:00 PM IST By: Hitesh
ಗೃಹಜ್ಯೋತಿ ಟಾಪ್‌ ಅಪ್ಡೇಟ್ಸ್‌

Gruha Jyoti ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ.

ಗೃಹಜ್ಯೋತಿ ಯೋಜನೆಯ ಲಾಭ ಎಷ್ಟು ಜನರಿಗೆ ತಲುಪಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ.

ಇದಲ್ಲದೇ ಬರಪರಿಹಾರವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

ಏಳನೇ ವೇತನ ಆಯೋಗದ ಬಗ್ಗೆ ಸರ್ಕಾರ ಮಹತ್ವದ ಅಪ್ಡೇಟ್ಸ್‌ ನೀಡಿದೆ.

ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ ಎಲ್ಲ ಸುದ್ದಿಗಳ ಚುಟುಕು ವಿವರ ಇಲ್ಲಿದೆ.

1. ಬರ ಪರಿಹಾರ ಹಣ ನೇರ ರೈತರ ಖಾತೆಗೆ

2. 2030ರ ವೇಳೆಗೆ ಶೇ 50ರಷ್ಟು ಅಪಘಾತ ಇಳಿಕೆ ಗುರಿ

3. ಉತ್ತರ ಭಾರತದಲ್ಲಿ ಮುಂದುವರಿದ ಭಾರೀ ಚಳಿ

4. ಮೀನುಗಾರಿಕೆ ಮತ್ತು ಕೃಷಿ ವಿಮಾ ಯೋಜನೆ: ಚರ್ಚೆ

5. ಏಳನೇ ವೇತನ ಆಯೋಗ ಜಾರಿ: ಗುಡ್‌ನ್ಯೂಸ್‌

6. ರಾಜ್ಯದಲ್ಲಿ ಮುಂದುವರಿದ ಒಣಹವೆ

----------------

7. ಗೃಹಜ್ಯೋತಿ; 1.65 ಕೋಟಿ ಜನರಿಗೆ ಲಾಭ

8. ಕರ್ನಾಟಕಕ್ಕೆ 348.80 ಕೋಟಿ ಅನುದಾನ 

9. ಬಾಲ ರಾಮಮೂರ್ತಿ ರಾಮಲಲಾ ವಿಗ್ರಹ ಅಂತಿಮ  

10. ಕರ್ನಾಟಕದ ಪೊಲೀಸರಿಗೆ ಬೆಳ್ಳಿ ಪದಕ!

ಸುದ್ದಿಗಳ ವಿವರ ಈ ರೀತಿ ಇದೆ. 

ರೈತರ ಖಾತೆಗೆ ನೇರ ಹಣ ಜಮೆ 

1. ಕರ್ನಾಟಕದಲ್ಲಿ ಬರ ಎದುರಾಗಿದ್ದು, ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಫ್ರೂಟ್ಸ್ ತಂತ್ರಾಂಶದ ಮೂಲಕ ನೇರವಾಗಿ ಹಾಕಲಾಗುವುದು

ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಬರ ಪರಿಹಾರದ ಹಣ ದುರ್ಬಳಕೆ ತಪ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯಾದ್ಯಂತ ಈಗಾಗಲೇ 7 ಲಕ್ಷದ 63 ಸಾವಿರ ಮೇವು

ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ ಎಂದಿದ್ದಾರೆ.
-------------------
2. ದೇಶದಲ್ಲಿ 2030ರ ವೇಳೆಗೆ ಅಪಘಾತ ಪ್ರಮಾಣ ಶೇಕಡ 50ರಷ್ಟು ತಗ್ಗಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು

ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮದಲ್ಲಿ

ಅವರು ಮಾತನಾಡಿದರು. ದೇಶದಲ್ಲಿ ಪ್ರತಿ ಗಂಟೆಗೆ 53 ಅಪಘಾತಗಳು ಸಂಭವಿಸುತ್ತಿವೆ. 19 ಜನ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಾರೆ.

ಹೀಗಾಗಿ, ರಸ್ತೆ ಅಪಘಾತಗಳ ಪ್ರಮಾಣ ಕಡಿಮೆ ಮಾಡಿ ಸಾವಿನ ಸಂಖ್ಯೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದಿದ್ದಾರೆ. 
-------------------
3. ಉತ್ತರ ಭಾರತದಲ್ಲಿ ಭಾರೀ ಚಳಿ ಮುಂದುವರಿದಿದೆ.

ಬುಧವಾರ ಹಾಗೂ ಗುರುವಾರವೂ ಭಾರೀ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೇ   ಶೀತಗಾಳಿ ಇನ್ನಷ್ಟು ಚುರುಕುಗೊಳ್ಳಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರಪ್ರದೇಶ ಹಾಗೂ ಬಿಹಾರಲ್ಲಿ

ಶೀತಗಾಳಿ ಇನ್ನಷ್ಟು ಹೆಚ್ಚಾಗಲಿದ್ದು,  ಚಳಿ ಪ್ರಮಾಣ 2 ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ.

ಮುಂದಿನ 5 ದಿನಗಳಲ್ಲಿ ರಾತ್ರಿ ವೇಳೆ ತಾಪಮಾನ ಇನ್ನಷ್ಟು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-------------------   

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಶೀಘ್ರ 

4. ಮೀನುಗಾರಿಕೆ ಹಾಗೂ ಕೃಷಿ ವಿಮಾ ಯೋಜನೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ

ದೆಹಲಿಯಲ್ಲಿ ಗುರುವಾರ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಪರುಷೋತ್ತಮ ರೂಪಾಲ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೃಷಿ ಮತ್ತು ಮೀನುಗಾರಿಕಾ ವಲಯದಲ್ಲಿ ವಿಮಾ ಯೋಜನೆಯ ಕುರಿತು ಚರ್ಚೆ ನಡೆಯಲಿದೆ. 
-------------------
5. ರಾಜ್ಯದ ಸರ್ಕಾರಿ ನೌಕರರ ವೇತನ ಬೇಡಿಕೆಯನ್ನು ಈಡೇರಿಸುವಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡುವುದಕ್ಕೆ ಏಳನೇ ವೇತನ ಆಯೋಗ ವರದಿ ಬಂದ ಕೂಡಲೇ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೇ ನೌಕರರ ಸಂಘಕ್ಕೆ ಭರವಸೆಯನ್ನೂ ನೀಡಿದ್ದಾರೆ.
-------------------
6. ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ.

ಅತಿ ಕಡಿಮೆ ಚಳಿ ವಿಜಯಪುರದಲ್ಲಿ 12 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಉಳಿದಂತೆ ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. ಬೆಳಗಿನ ಜಾವ ದಟ್ಟ ಮಂಜು ಆವರಿಸಿರಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
------------------- 

ಎಲ್ಲ ಪೊಲೀಸ್‌ ಸಿಬ್ಬಂದಿಗೆ ಬೆಳ್ಳಿ ಪದಕ 

7. ರಾಜ್ಯ ಸರ್ಕಾರ ಪರಿಚಯಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಿಂದ 1 ಕೋಟಿ

65 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
-------------------
8. 15ನೇ ಹಣಕಾಸು ಆಯೋಗದ ಶಿಫಾರಸಿನ ಆಧಾರದ ಮೇಲೆ ಕರ್ನಾಟಕಕ್ಕೆ ಪ್ರಸಕ್ತ ಸಾಲಿನ ಕೇಂದ್ರದ

ಪಾಲಿನ ರಾಜ್ಯ ವಿಪತ್ತು ಸ್ಪಂದನೆ ನಿಧಿಯ ಎರಡನೇ ಕಂತು 348.80 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲು ಕೇಂದ್ರ ಮುಂದಾಗಿದೆ.
-------------------

9.ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಬಾಲ ರಾಮಮೂರ್ತಿ

ರಾಮಲಲಾ ವಿಗ್ರಹ ಪ್ರತಿಷ್ಠಾಪನೆಗೆ ಅಂತಿಮವಾಗಿ ಆಯ್ಕೆಯಾಗಿದೆ ಎಂದು ರಾಮ ಮಂದಿರ ಟ್ರಸ್ಟ್ ಅಧಿಕೃತವಾಗಿ ಘೋಷಿಸಿದೆ.
-------------------
10. ಕರ್ನಾಟಕ ಏಕೀಕರಣ ಸುವರ್ಣ ಮಹೋತ್ಸದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಿಸಲಾಗುವುದು

ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.