News

GruhaJyothi Scheme : ಬರೋಬ್ಬರಿ 1.41 ಕೋಟಿ ಕುಟುಂಬಗಳ ನೋಂದಣಿ – ಸಿಎಂ ಸಿದ್ದರಾಮಯ್ಯ

07 August, 2023 12:46 PM IST By: Kalmesh T
GruhaJyothi Scheme: Registration of 1.41 crore families – CM Siddaramaiah

GruhaJyothi Scheme Registration : ಗೃಹಜ್ಯೋತಿ ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಕುಟುಂಬಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

GruhaJyothi Scheme : ಗೃಹಜ್ಯೋತಿ ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಕುಟುಂಬಗಳು ನೋಂದಾಯಿಸಿಕೊಂಡಿದ್ದಾರೆ. ಜುಲೈ ಒಂದರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಗಸ್ಟ್ ಮಾಹೆಯಿಂದ ಶೂನ್ಯ ಬಿಲ್ಲು ಬರುತ್ತದೆ. ಅದನ್ನು ಸಾಂಕೇತಿಕವಾಗಿ 10 ಜನಕ್ಕೆ ನೀಡಿದ್ದೇವೆ. ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್, ನಾರಾಯಣ ಗುರು ತಿಳಿಸಿದಂತೆ ನುಡಿದಂತೆ ನಡೆಯುತ್ತಿದ್ದೇವೆ ಎಂದರು.

ಗೃಹಲಕ್ಷ್ಮಿ ಯೋಜನೆಗೆ (Gruha lakshmi Scheme ) ಆಗಸ್ಟ್ 24 ರಂದು ಚಾಲನೆ ನೀಡಲಿದ್ದೇವೆ. ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ. ಗಳನ್ನು ಈ ಯೋಜನೆಯಡಿ ನೀಡಲಾಗುವುದು.

ನಾವು ಜನರ ಕೈಗೆ ದುಡ್ಡು ನೀಡುತ್ತಿದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ.

ಐದು ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ ವಾರ್ಷಿಕವಾಗಿ 48 ರಿಂದ 60 ಸಾವಿರ ರೂಪಾಯಿ ಜನರಿಗೆ ಲಭಿಸಲಿದೆ.

Congress 5 Guarantee : ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಗ್ಯಾರಂಟಿ ಜಾರಿಯ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನೂ ಜಾರಿ ಮಾಡುತ್ತೇವೆ.

ಇಂದು ಐತಿಹಾಸಿಕವಾದ ದಿನ. ಚುನಾವಣಾ ಪೂರ್ವದಲ್ಲಿ ಐದು ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ವಾಗ್ದಾನ ಮಾಡಲಾಗಿತ್ತು.

ಈ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡುವ ಜವಾಬ್ದಾರಿ ನಮ್ಮದು ಎಂಬ ಭರವಸೆಯನ್ನು ನೀಡಲಾಗಿತ್ತು.

2013-18 ರಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಸರ್ಕಾರ ಕೊಟ್ಟಂತಹ 165 ಭರವಸೆಗಳನ್ನು 158 ಈಡೇರಿಸಿ, 30 ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು.

ಆದ್ದರಿಂದ ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದರು. ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ 76 ಭರವಸೆಗಳನ್ನು ಈ ಬಜೆಟ್‌ನಲ್ಲಿ ಜಾರಿಗೆ ತಂದಿದ್ದೇವೆ.

ಮುಂದಿನ ಐದು ವರ್ಷಗಳಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು.

ಈ ಬಾರಿಯೂ ನಾವು ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನ ಕೈಗೊಳ್ಳಲಾಯಿತು.

ಅದರಂತೆ ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಲಾಯಿತು. ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ.

ಪ್ರತಿದಿನ ಸುಮಾರು 50 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ ಎಂದು ಅವರು ತಿಳಿಸಿದರು.

MGNREGA ದ ಆಸರೆ : ಪೇರಲ ಬೆಳೆದು 4 ಲಕ್ಷದವರೆಗೆ ಗಳಸುತ್ತಿರುವ ವಿಕಲಚೇತನ ರೈತ