1. ಸುದ್ದಿಗಳು

ಗುಲಾಬ್ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

Ramlinganna
Ramlinganna

ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಗುಲಾಬ್ ಚಂಡಮಾರುತ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಗುಲಾಬ್ ಚಂಡಮಾರುತ ಪರಿಣಾಮವಾಗಿ ಭಾರಿ ಮಳೆಯಾಗುವ ಸಂಭವವಿರುವುದರಿಂದ  ಸೆಪ್ಟೆಂಬರ್ 27 ಮತ್ತು 28 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

ಬಂಗಾಳಕೊಲ್ಲಿಯಲ್ಲಿ  ಸೃಷ್ಟಿಯಾಗಿರುವ ಗುಲಾಬ್ ಚಂಡಮಾರುತ ದಕ್ಷಿಣ ಒಡಿಸ್ಸಾ ಮತ್ತು ಉತ್ತರ ಆಂಧ್ರಪ್ರದೇಶದ ಕರಾವಳಿಗೆ ಸೋಮವಾರ ಮಧ್ಯರಾತ್ರಿ ಅಪ್ಪಳಸಲಿದ್ದು, ಇದರ ಪರಿಣಾಮವಾಗಿ  ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ  ಜಿಲ್ಲೆಗಳಲ್ಲಿಯೂ ಸೆಪ್ಟೆಂಬರ್ 27 ಮತ್ತು 28 ರಂದು ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ಕರಾವಳಿಯಲ್ಲಿ ದುರ್ಬಲವಾಗಿದ್ದ ಮುಂಗಾರು ಸೋಮವಾರದಿಂದ ಚುರುಕುಗೊಳ್ಳಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಆಂಧ್ರ, ಒಡಿಸ್ಸಾದಲ್ಲಿ ಹೈ ಅಲರ್ಟ್:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ, ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗವ ಸಾಧ್ಯತೆಯಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಸ್ಸಾದಲ್ಲಿ ಭೂಕುಸಿತವೂ ಉಂಟಾಗುವ ಸಾಧ್ಯತೆಯಿದೆ. ಗಾಳಿಯು ಸೂಮಾರು ಗಂಟೆಗೆ 95 ಕಿ.ಮೀಟರ್ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಸ್ತುತ ಒಡಿಸ್ಸಾದಲ್ಲಿ 13 ರಾಷ್ಟ್ರೀಯ ವಿಪತ್ತು ನಿಗ್ರಹ ದಳವನ್ನು ಹಾಗೂ ಆಂಧ್ರಪ್ರದೇಶದಲ್ಲಿ ಒಟ್ಟು ಐದು ಎನ್.ಡಿ.ಆರ್.ಎಫ್ ಪಡೆಯನ್ನು ನಿಯೋಜನೆ ಮಾಡಲಾಗಿದೆ.

;

ಉತ್ತರ ಪ್ರದೇಶ, ಮಧ್ಯಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ, ಪಶ್ಚಿಮ ರಾಜಸ್ಥಾನ, ಬಿಹಾರ, ಜಾರ್ಖಂಡ್‌ನಲ್ಲಿಯೂ 24 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಮಳೆ ಸುರಿಸುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಅಂದಾಜಿಸಲಾಗಿದೆ

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.