1. ಸುದ್ದಿಗಳು

ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ನಿಧನ: ಸಿಎಂ ಬಿಎಸ್'ವೈ ಸೇರಿ ಗಣ್ಯರ ಸಂತಾಪ

C.M Udasi

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಸಿ‌.ಎಂ.ಉದಾಸಿ ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಪುತ್ರ ಹಾಗೂ ಸಂಸದ ಶಿವಕುಮಾರ ಉದಾಸಿ ಹಾಗೂ ಪುತ್ರಿಯನ್ನು ಅವರು ಅಗಲಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಲತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಉದಾಸಿಯವರ ಅಂತ್ಯಕ್ರಿಯೆ ನಡೆಯಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.
ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ‌ ಆಯ್ಕೆಯಾಗಿದ್ದರು. 2004 ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು. ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿಸಿದ್ದರು.ಹಲವು ರೈತ ಹೋರಾಟಗಳಲ್ಲಿ ಭಾಗಿಯಾಗಿದ್ದ ಸಜ್ಜನ ವ್ಯಕ್ತಿಯಾಗಿ ಅವರು ಗುರುತಿಸಿಕೊಂಡಿದ್ದರು.

ಸಿ.ಎಂ ಉದಾಸಿ ನಿಧನಕ್ಕೆ ಮುಖ್ಯ ಮಂತ್ರಿಗಳ ಸಂತಾಪ 

ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ  ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Published On: 08 June 2021, 11:14 PM English Summary: Hanagal bjp mla cm udasi passes away

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.