ಶಿಲ್ಪ ಕೆತ್ತನೆ ಮತ್ತು ಮರದ ಕೆತ್ತನೆಯ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಮಾಸಿಕ ಪ್ರೋತ್ಸಾಹ ಧನವನ್ನು ಈಗಿನ 750 ರೂಪಾಯಿಗಳಿಂದ 1,500 ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ತಿಳಿಸಿದ್ದಾರೆ.
ಇದನ್ನೂ ಓದಿರಿ:
ಕೆರೂರು ಏತ ನೀರಾವರಿ ಯೋಜನೆಗೆ CM ಬೊಮ್ಮಾಯಿ ಶಂಕುಸ್ಥಾಪನೆ!
“ನೈಸ್ ಯೋಜನೆಗೆ ನೀಡಿದ್ದ 543 ಎಕರೆ ಭೂಮಿ ವಾಪಸ್”- ಕಂದಾಯ ಸಚಿವ ಆರ್.ಅಶೋಕ್
ವಿಕಾಸೌಧದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಸಾಗರದಲ್ಲಿನ ‘ಶಿಲ್ಪ ಗುರುಕುಲದಲ್ಲಿ’ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ 17 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ನೀಡಿ ಸಚಿವರು ಮಾತನಾಡುತ್ತಾ, ಕಲ್ಲು ಮತ್ತು ಮರ ಕೆತ್ತನೆ ತರಬೇತಿಯ ಮತ್ತೊಂದು ಕೇಂದ್ರವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
ಕರ್ನಾಟಕದಲ್ಲಿ ಕೇಜ್ರಿವಾಲ್ ಅಲೆ! ಇಲ್ಲೂ ಸೃಷ್ಟಿಸಲಿದ್ದಾರಾ ಆಮ್ ಆದ್ಮಿ ಪಾರ್ಟಿಯ ನೆಲೆ ?
ಶಿಲ್ಪ ಮತ್ತು ಮರದ ಕೆತ್ತನೆಗೆ ಬಹುಬೇಡಿಕೆ ಇರುವುದರಿಂದ ಮತ್ತಷ್ಟು ಅಭ್ಯರ್ಥಿಗಳಿಗೆ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು. ಕರ ಕುಶಲಕರ್ಮಿಗಳಿಗೆ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಮಹಿಳೆಯರು ಸಹ ಕರಕುಶಲ ತರಬೇತಿ ಪಡೆಯುಲು ಆಸಕ್ತಿ ತೋರಿಸಬೇಕು. ಸಾಗರ ತರಬೇತಿ ಕೇಂದ್ರದಲ್ಲಿನ ಸಮಸ್ಯೆಗಳನ್ನು ಸದ್ಯದಲ್ಲಿಯೇ ಸಭೆ ನಡೆಸಿ ಬಗೆಹರಿಸಿ, ಕೇಂದ್ರವನ್ನು ಸುಸಜ್ಜಿತಗೊಳಿಸಲಾಗುವುದು ಎಂದು ಭರವಸೆ ಕೊಟ್ಟರು.
ಏಪ್ರಿಲ್ 25-30 ರವರೆಗೆ 'ಆಜಾದಿ ಕಾ ಅಮೃತ್ ಮಹೋತ್ಸವ'; 'ಕಿಸಾನ್ ಭಾಗಿದರಿ, ಪ್ರಾಥಮಿಕ ಹಮಾರಿ' ಅಭಿಯಾನ!
Share your comments