1. ಸುದ್ದಿಗಳು

JDS ಜೆಡಿಎಸ್‌ನಿಂದ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ ?

Hitesh
Hitesh
HD Kumaraswamy, Nikhil Kumaraswamy expelled from JDS!

 ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿಯಾದ ನಡುವೆಯೇ ಇದೀಗ ಪಕ್ಷದಲ್ಲಿ ನಾಟಕೀಯ ಬೆಳವಣಿಗೆ ಕಂಡುಬಂದಿದೆ.

ಜೆಡಿಎಸ್‌ನಿಂದ  ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನೇ ಉಚ್ಛಾಟನೆ ಮಾಡಲಾಗಿದೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು  ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್.ಡಿ ಕುಮಾರಸ್ವಾಮಿ

ಹಾಗೂ ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ! 

ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ

ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು, ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ

ನಾಯಕ ಎಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 

ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್‌.ಡಿ ಕುಮಾರಸ್ವಾಮಿ

ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ ಎಂದು ಹೇಳಿದ್ದಾರೆ ಎನ್ನುವ ಪತ್ರ ವೈರಲ್‌ ಆಗಿದೆ.

ಆದರೆ, ಈ ಸಂಬಂಧ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಸ್ಪಷ್ಟನೆ ಇನ್ನಷ್ಟೇ ಕೊಡಬೇಕಿದೆ. 

Published On: 17 October 2023, 05:12 PM English Summary: HD Kumaraswamy, Nikhil Kumaraswamy expelled from JDS!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.