ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ ಕರಾವಳಿ ಪ್ರದೇಶದಲ್ಲಿ ದಾಖಲಾಗಿದೆ. ಕರಾವಳಿ ಭಾಗದಲ್ಲಿ ತಾಪಮಾನ ಹೆಚ್ಚಾಗಿದ್ದು, ಬಿಸಿಲಿನ ಝಳ ಅಧಿಕವಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಒಂದೆರಡು ಕಡೆಗಳಲ್ಲಿ ಶಾಖದ ಅಲೆಗಳು ಸೃಷ್ಟಿ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾವಿನ ನಂತರವೂ ಆತ್ಮೀಯರೊಂದಿಗೆ ಗೊಬ್ಬರ ರೂಪದಲ್ಲೂಳಿವ ಪರಿಕಲ್ಪನೆ!
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತಾಪಮಾನ ಪ್ರಮಾಣ ಹೆಚ್ಚಳವಾಗುತ್ತಿರುವುದು ವರದಿ ಆಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಒಳನಾಡಿನಲ್ಲಿ ಕರಾವಳಿ ಹಾಗೂ ಹಲವು ಕಡೆಗಳಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 2 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಕರಾವಳಿಯ ಕೆಲವು ಕಡೆಗಳಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಅತ್ಯಂತ ಗಮನಾರ್ಹವಾಗಿ 4.1 ಡಿಗ್ರಿ ಸೆಲ್ಸಿಯಸ್ ಏರಿಕೆ ಆಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಿ ದಾಖಲಾಗಿದೆ.
ಇನ್ನು ರಾಜ್ಯದಲ್ಲಿ ಅತಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Bank 5 ದಿನ ಮಾತ್ರ ಇನ್ಮುಂದೆ ಬ್ಯಾಂಕ್ ಉದ್ಯೋಗಿಗಳಿಗೆ ಕೆಲಸ ?
ಶಾಖಾಂತರಗಳ ಎಚ್ಚರಿಕೆ !
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಮುಂದಿನ 48 ಗಂಟೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶ: ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ
ಸೆಲ್ಸಿಯಸ್ ಮತ್ತು ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆ ಇದೆ.
ಮೇಲ್ಮೈಗಾಳಿ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್
ಮತ್ತು ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು: ಬಸವರಾಜ ಬೊಮ್ಮಾಯಿ
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ.
ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿರಿ: ಹಕ್ಕಿಜ್ವರದ ಸಮಯದಲ್ಲೇ ಹೆಚ್ಚು ಕೋಳಿ ತಿಂತೀನಿ: ಜಾರ್ಖಂಡ್ ಆರೋಗ್ಯ ಸಚಿವ