1. ಸುದ್ದಿಗಳು

Weather In Karnataka | ಉತ್ತರ ಕರ್ನಾಟಕದಲ್ಲಿ ಭಾರೀ ಬಿಸಿಲು, ದಕ್ಷಿಣದಲ್ಲಿ ಮಳೆ!

Hitesh
Hitesh
Heavy heat in North Karnataka, rain in South!

ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಹವಾಮಾನದಲ್ಲಿ ವ್ಯತ್ಯಾಸ ಕಂಡುಬಂದಿದೆ.

ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಬಿಸಿಲು ಕಾಣಿಸಿಕೊಂಡಿದ್ದರೆ,

ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   

ರಾಜ್ಯದ ವಿವಿಧ ಭಾಗದಲ್ಲಿ ರಣ ಬಿಸಿಲು ಇದ್ದರೆ ಇನ್ನು ಕೆಲವು ಕಡೆ ಮಳೆ ಮುಂದುವರಿದಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶವು 34.8 ಡಿಗ್ರಿ ಸೆಲ್ಸಿಯಸ್‌ ರಾಯಚೂರಿನಲ್ಲಿ ದಾಖಲಾಗಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.0 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ. 

ಕರಾವಳಿ, ಮಂಡ್ಯದಲ್ಲಿ ಭಾರೀ ಮಳೆ

ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ಭಾರೀ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮುಂದಿನ 24 ಘಂಟೆಗಳು: ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದೆರಡು

ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Petrol-Diesel Price: 18 ತಿಂಗಳಿಂದ ಪೆಟ್ರೋಲ್‌, ಡಿಸೇಲ್‌ ಬೆಲೆ ಹೆಚ್ಚಳವಾಗಿಲ್ಲ ಕಾರಣ ಅಚ್ಚರಿ!  

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ

ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ

ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಉಷಾಂಶಗಳ ಎಚ್ಚರಿಕೆ ಮುಂದಿನ 48 ಘಂಟೆಗಳು:

ಗರಿಷ್ಠ ಉಷ್ಣಾಂಶಗಳು

ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ

ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಶಿವಮೊಗ್ಗ, ಮತ್ತು ಚಿತ್ರದುರ್ಗ ಜಿಲ್ಲೆ

ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕನಿಷ್ಠ ಉಷ್ಣಾಂಶಗಳ: ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಗೂ ಕರಾವಳಿಯ

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗಿರುತ್ತದೆ. 

Todays Gold Rate ಚಿನ್ನದ ಬೆಲೆಯಲ್ಲಿ ಸೋಮವಾರ ಭರ್ಜರಿ ಏರಿಕೆ !

ಉತ್ತರ ಒಳನಾಡಿನ ಬೀದರ್, ವಿಜಯಪುರದ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಕಡಿಮೆ ಇರುವ ಸಾದ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಕೊಡಗು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಗಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಸೋಮವಾರ ಬೆಂಗಳೂರಿನಲ್ಲಿ ವಾತಾವರಣ

ಮುಂದಿನ 24 ಗಂಟೆಗಳು, ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ.

ಕೆಲವು ಕಡೆ ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ.

ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ.

ಕೆಲವು ಕಡೆ ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆ ಯಾಗುವ ಬಹಳಷ್ಟು ಸಾಧ್ಯತೆಗಳಿವೆ.

ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಕಳೆದ  24 ಗಂಟೆಯಲ್ಲಿ ಹವಾಮಾನ ಹೇಗಿತ್ತು ? 

ಭಾನುವಾರ ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):

ಹಾರಂಗಿ, ನಾಪೋಕ್ಲು (ಎರಡೂ ಕೂಡಗು ಜಿಲ್ಲೆ) 4: ಸರಗೂರು (ಮೈಸೂರು ಜಿಲ್ಲೆ) 3: ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ),

ಮಾಗಡಿ (ರಾಮನಗರ ಜಿಲ್ಲೆ), ಸುತ್ತೂರು AWS (ಮೈಸೂರು ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

 

Published On: 09 October 2023, 12:53 PM English Summary: Heavy heat in North Karnataka, rain in South!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.