News

ಇಂದು ರಾಜ್ಯಕ್ಕೆ ಮಳೆ ಪ್ರವೇಶ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ, ತಮಿಳುನಾಡು ಪುದಚೇರಿಯಲ್ಲಿ ನಿವಾರ್ ಚಂಡಮಾರುತ

25 November, 2020 1:49 PM IST By:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಳನಾಡಿಗೆ ಮಳೆ ಪ್ರವೇಶವಾಗಲಿದ್ದು, ಕೆಲವು ಸಂದರ್ಭದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ. 25 ಮತ್ತು 26 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ನ. 27 ರಿಂದ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ತಮಿಳುನಡಿನ ಕರಾವಳಿಯಲ್ಲಿ ಚಂಡಮಾರುತ  ಕೇಂದ್ರೀಕೃತವಾಗಿದ್ದರಿಂದ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ, ಮಂಡ್ಯ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಿವಾರ್ ಚಂಡಮಾರುತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಒಟ್ಟು 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು, 987 ನಿರಾಶ್ರಿತ ಕೇಂದ್ರಗಳನ್ನು  ತೆರೆಯಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

130-140 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಬುಧವಾರ ಸಂಜೆ ಮತ್ತು ಗುರುವಾರ ಬೆಳಗ್ಗೆ ನಿವಾರ್ ಚಂಡಮಾರುತ ಚೆನೈ ಮತ್ತು ಪುದಚರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.