News

ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

29 September, 2020 8:41 AM IST By:

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೆ.29ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಇರುವುದರಿಂದ  ರಾಜ್ಯದ 11 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಮೋಡಗಳ ಚಲನೆ ಹೆಚ್ಚಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ. 29 ಮತ್ತು 30 ರಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂಗಾರು ಮುಗಿದರೂ ರಾಜ್ಯದ ಕೆಲ ಭಾಗಗಳಲ್ಲಿ ಅಕ್ಟೋಬರ್ 15 ರವರೆಗೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಪ್ಪಳ– ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮಹಿಳೆಯರ ಶವ ಪತ್ತೆ: ಯಲಬುರ್ಗಾ ತಾಲ್ಲೂಕಿನ ಕರಮುಡಿ ಗ್ರಾಮದ ಹೊರವಲಯದ ಬಂಡಿಹಾಳ ರಸ್ತೆಯ ಹಳ್ಳದಲ್ಲಿ ಭಾನುವಾರ ಕೊಚ್ಚಿ ಹೋಗಿದ್ದ ರತ್ನವ್ವ ಮಾನಶೆಟ್ಟಿ ಹಾಗೂ ಶಾಂತವ್ವ ಮ್ಯಾಗೇರಿ ಎಂಬ ಮಹಿಳೆಯರ ಶವಗಳು ಸೋಮವಾರ ಪತ್ತೆಯಾಗಿವೆ. ಕೃಷಿ ಚಟುವಟಿಕೆ ಮುಗಿಸಿ ಬರುತ್ತಿದ್ದಾಗ ಅವರು ಹಳ್ಳದ ಪ್ರವಾಹದಲ್ಲಿ ಕೊಚ್ಚಿಹೋಗಿದ್ದರು.