1. ಸುದ್ದಿಗಳು

ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ-22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

rain alert

ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿರುವುದರಿಂದ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂಗಾರು ಮಾರುತಗಳು ಒಂದು ದಿನ ಮುನ್ನವೇ ರಾಜ್ಯವನ್ನು ಪ್ರವೇಶಿಸಿದೆ. ಇದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರವೇಶಿಸುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಿಸಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು  ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಪುರ, ಬಳ್ಳಾರಿ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ರಾಮನಗರ, ಮೈಸೂರು, ಮಂಡ್ಯ, ತುಮಕುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಱಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮಳೆ ತೀವ್ರಗೊಳ್ಳುವ ಸೂಚನೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮೊದಲ ದಿನವೇ ಭಾರಿ ಮಳೆ

ಮುಂಗಾರು ಆರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆಯಾಗಲಿದೆ.

Published On: 05 June 2021, 10:16 AM English Summary: Heavy rain alert in 22 districts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.