News

ಕರಾವಳಿ, ಉಡುಪಿಯಲ್ಲಿ ಜುಲೈ 29 ರಿಂದ ಭಾರಿ ಮಳೆ- ಯೆಲ್ಲೋ ಅಲರ್ಟ್

28 July, 2020 9:44 AM IST By:
rainy cloud

ರಾಜ್ಯದಲ್ಲಿ ಜುಲೈ 29 ರಿಂದ ಐದು ದಿನಗಳ ಕಾಲ ಭಾರಿ ಮಳೆ (Heavy rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜುಲೈ 29 ರಿಂದ ಎರಡು ದಿನ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಹಾಸನ, ಕೊಡಗು ಹಾಗೂ ಚಿಕ್ಕಮಂಗಳೂರಿನಲ್ಲಿ ಜುಲೈ 30 ರಿಂದ 3 ದಿನಗಳ ಕಾಲ ಭಾರಿ ಮಳೆ ಸುರಿಯುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಸಾಧಾರಣ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು (fishers) ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.