News

ಕಲ್ಯಾಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ-ಆರೇಂಜ್ ಅಲರ್ಟ್

27 September, 2020 9:35 AM IST By:

ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆ. 27 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,  ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.,

ಗುಡುಗು ಸಹಿತ ಭಾರಿ ಮಳೆಯಾಗುವ ಕಾರಣಕ್ಕೆ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ವ್ಯಾಪಕ ಮಳೆ ಬೀಳಲಿರುವ ಕಾರಣಕ್ಕೆ ಉತ್ತರ ಒಳನಾಡಿನ, ಗದಗ,ವಿಜಯುರ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಸೆ. 27 ರಂದು ಎಲ್ಲಾ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಗೆ ಬೆಳೆ ಹಾನಿ:

ಕಳೆದ ವಾರದಲ್ಲಿ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ತಗ್ಗಿದೆ. ಆದರೆ ಉತ್ತರ ಕರ್ನಾಟಕದಲ್ಲಿ ತನ್ನ ಅಬ್ಬರ ಮುಂದುವರೆಸಿದೆ. ಇದರಿಂದಾಗಿ ಲಕ್ಷಾಂತರ ಎಕರೆ ಬೆಳೆ ಹಾನಿಯಾಗಿದೆ.

ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ನಿರಂತರವಾಗಿ ಮಳೆ ಸುರಿದಿದ್ದರಿಂದ ಅಪಾರ ಪ್ರಮಾಣ ಹೆಸರು, ಉದ್ದು ಬೆಳೆ ಹೊಲದಲ್ಲಿಯೇ ಮೊಳಕೆಯೊಡೆಯಿತು. ಹಲಾವರು ರೈತರ ಬೆಳೆ ಹೊಲದಲ್ಲಿಯೇ ಕೊಳೆತುಹೋಯಿತು. ಈಗ ನೆಮ್ಮದಿಯ ಉಸಿರಾಡುತ್ತಿರುವಾಗಲೇ ಮತ್ತೇ ಮಳೆಯ ಆರ್ಭಟ ಮುಂದುವರೆದಿದೆ. ಕಬ್ಬು, ಹತ್ತಿ, ತೊಗರಿ, ಈರುಳ್ಳಿ ಬೆಳೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.