News

ಇಂದಿನಿಂದ ಗುಡುಗು, ಆಲಿಕಲ್ಲು ಸಹಿತ ಭಾರಿ ಮಳೆ ಸಾಧ್ಯತೆ

04 January, 2021 1:15 PM IST By:

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನವರಿ 8ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರೆಯಲಿದ್ದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜನವರಿ 8ರವರೆಗೂ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ,ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಭಾರತದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಸಾದ್ಯತೆ

ಉತ್ತರ ಭಾರತದಲ್ಲಿ ಮುಂದಿನ ಮೂರು ದಿನಗಳವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಶೀತ ವಾತಾವರಣ ಮುಂದುವರೆಯಲಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಾಫರಾಬಾದ್ , ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಭಾಗಗಳಲ್ಲಿ ಗರಿಷ್ಠ ಶೀತ ದಾಖಲಾಗುವ ಸಾಧ್ಯತೆ ಇದೆ. ನಂತರ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ವಾಯುವ್ಯ ಮಾರುತಗಳು ಬೀಸುವ ಮುನ್ಸೂಚನೆ ಇದೆ.