News

ರಾಜ್ಯದಲ್ಲಿ ಇಂದಿನಿಂದ ಆಗಸ್ಟ್ 26ರವರೆಗೂ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್

23 August, 2021 10:47 AM IST By:
rain alert

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧೆಡೆ ಆಗಸ್ಟ್ 26ರವರೆಗೆ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಕೋಲಾರ ಜಿಲ್ಲೆಗಳಲ್ಲಿ  ಅಧಿಕ ಮಳೆ ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಹವಾಮಾನ ಏರಿಳಿತ ಪರಿಣಾಮ ಮುಂಗಾರು ಚುರುಕಾಗಿರಲಿದೆ. ಇದರಿಂದ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಕಳೆದ ಎರಡು-ಮೂರು ದಿನಗಳಿಂದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಷಟ್ಟು ಮಳೆ ಸುರಿಯುತ್ತಿದೆ. ಇನ್ನೂ ನಾಲ್ಕು ದಿನ ಇದೇ ರೀತಿ ಮುಂದುವರೆಯುವ ಸಾಧ್ಯತೆಯಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಸೇರಿದಂತೆ ಉತ್ತರ ಒಳನಾಡು ಹಾಗೂ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಳ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 21 ರ ರಾತ್ರಿ  10 ಸೆಂ.ಮೀ, ಜಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ 9 ಸೆಂ.ಮೀ, ಕಲಬುರಗಿ ಚಿಂಚೋಳಿಯಲ್ಲಿ 5 ಸೆಂ.ಮೀ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 23 ಮತ್ತು 24 ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದೇಶದ ಪಂಜಾಬ, ಹರಿಯಾಣ ರಾಜಸ್ಥಾನ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 26ರವರೆಗೆ ಚದುರಿದ ಮಳೆಯಾಗಲಿದೆ. ಉತ್ತರಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗಲಿದೆ.  ಈಗಾಗಲೇ ದೇಶಾದ್ಯಂತ ಮುಂಗಾರು ಮಳೆ ಚುರುಕಾಗಿದ್ದು, ಆಗಸ್ಟ್ 26ರವರೆಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಶಾನ್ಯ ರಾಜ್ಯಗಳಲ್ಲಿ ಹಾಗೂ ಪಶ್ಚಿಮಬಂಗಾಳ, ಸಿಕ್ಕಿಂ, ಬಿಹಾರ ರಾಜ್ಯದಲ್ಲಿ ಆಗಸ್ಟ್ 24 ರಿಂದ 26ರವರೆಗೆ ಮಳೆಯಾಗಲಿದೆ. ಆಗಸ್ಟ್ 25 ರಿಂದ 26ರವರೆಗೆ ಬಿಹಾರದಲ್ಲಿ ಅಧಿಕ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ವಿದರ್ಭದಲ್ಲಿ ಚಂಡಮಾರುತ ಪ್ರಭಾವದಿಂದಾಗಿ ನೆರೆಹೊರೆ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಜುಲೈ ದ್ವಿತೀಯಾರ್ಧದಲ್ಲಿ ಭಾರೀ ಮಳೆಯಾದ ನಂತರ ದೇಶದ ಹಲವು ರಾಜ್ಯಗಳಲ್ಲಿ ಮಳೆ ಕ್ಷೀಣಿಸಿತ್ತು. ಆಗಸ್ಟ್‌ ಮೊದಲ ವಾರ ಮತ್ತೆ ಮಳೆ ಆರಂಭವಾಗಿ ನಂತರ ಕಡಿಮೆಯಾಗಿತ್ತು. ಇದೀಗ ಮಳೆಯಿಂದ ಬಿಡುವು ಪಡೆದುಕೊಂಡಿದ್ದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಚಟುವಟಿಕೆ ಆರಂಭವಾಗಿದೆ.