News

ಇಂದು ಕೂಡ ಭಾರೀ ಮಳೆ ಎಚ್ಚರಿಕೆ! ಯಾವ ಜಿಲ್ಲೆಗಳಿಗೆ ಅಲರ್ಟ್‌?

10 July, 2023 9:55 AM IST By: Maltesh
Heavy rain alert Karnataka weather update

10 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದ ಬಹುತೇಕ ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ;  ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು- ಕರಾವಳಿ  ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಘಂಟೆಗಳು: ಇಲ್ಲ

ಗುಡುಗು ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ರಾಜ್ಯದ ಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

10 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾದಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Meteorological Centre Bangalore