News

ಜುಲೈ 25 ರಿಂದ ಕರಾವಳಿಯಲ್ಲಿ ವ್ಯಾಪಕ ಮಳೆ - ಆರೇಂಜ್ ಅಲರ್ಟ್ (orange alert)

25 July, 2020 9:45 AM IST By:

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಇದೇ ಜುಲೈ 25 ಮತ್ತು 26 ರಂದು ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶನಿವಾರದಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿಯ ತೀವ್ರತೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವುದರಿಂದ ಮುಂದಿನ ಎರಡು ದಿನಗಳವರೆಗೆ ಮೀನುಗಾರರು ಕಡಲಿಗೆ ಇಳಯಬಾರದೆಂದು ಇಲಾಖೆ ಎಚ್ಚರಿಸಿದೆ.

16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಜುಲೈ 26 ರಿಂದ 28 ರವರೆಗೆ ಮಳೆಯ ಪ್ರಮಾಣ ತುಸು ಕಡಿಮೆ ಇರಲಿದೆ. ಆದರೆ ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.