News

ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ- ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ

13 June, 2021 10:07 AM IST By:
rain alert

ರಾಜ್ಯದಲ್ಲಿ ಮುಂಗಾರು ಮಳೆಯು ಚುರುಕುಗೊಂಡಿದ್ದು,  ಜೂನ್ 17ರವರೆಗೆ  ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಮುಂಗಾರು ಹಾಗೂ ಪೂರ್ವ ಅರಬ್ಬಿ ಸಮುದ್ರ-ಬಂಗಾಳ ಉಪಸಗಾರದಲ್ಲಿ ವಾಯುಭಾರ ಕುಸಿತ ಮತ್ತು ಮೈಲ್ಮೈ ಸುಳಿಗಾಳಿ ಉಂಟಾಗಿದ್ದರಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲುಸಹಿತ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಪ್ರತಿಗಂಟೆಗೆ 50.ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ಯಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ.

ಸಮುದ್ರದಲ್ಲಿ 45  ರಿಂದಜ 55 ಕಿ.ಮೀ ವೇಗದಲ್ಲಿ ಗಾಳಇ ಬೀಸುವ ಸಾಧ್ಯತೆಯಿರುವುದರಿಂದ ಬಹಳಷ್ಟು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಯಾದಗಿರಿ, ಹಾಸನ, ಕೊಡಗು, ಶಿವಮೊಗ್ಗ, ವಿಜಯಪುರ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಸಹ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಚುರುಕುಗೊಂಡ ಮಳೆ- ಶನಿವಾರ ರಾತ್ರಿ ಬಹುತೇಕ ಜಿಲ್ಲೆಗಳಲ್ಲಿ ಸುರಿದ ಮಳೆ:

ಕರಾವಳಿ ಭಾಗದಲ್ಲಿ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದಿದೆ. ಮಂಗಳೂರು, ಉಡುಪಿ, ಕಲಬುರಗಿ, ಯಾದಗಿರಿ ಜಿಲ್ಲೆಯಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ.ಮಂಗಳೂರಿನಲ್ಲಿ ಶನಿವಾರ ರಾತ್ರಿ ದಿನಪೂರ್ತಿ ಮಳೆಯಾಗಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರವೂ ಬಿರುಸುಗೊಂಡಿದೆ.  ಕಲಬುರಗಿ ನಗರದ ಹಾಗೂ  ಜಿಲ್ಲೆಯ ಚಿಂಚೋಳಿ, ಸೇಡಂ, ಚಿತ್ತಾಪುರ ಸೇರಿದಂತೆ ವಿವಿಧೆಡೆ ಶನಿವಾರ ರಾತ್ರಿ ಮಳೆಯಾಗಿದೆ.