ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 20 ಮತ್ತು 21ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮ ವಾರದಂದು ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.,
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು,‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿ, ಬೀದರ, ಯಾದಗಿರಿ, ರಾಯೂಚೂರು, ಬಳ್ಳಾರಿ, ವಿಯಪುರ ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಸಾಧಾರಣ ಚದುರಿದ ಮಳೆಯಾಗಲಿದೆ
ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.