News

ರಾಜ್ಯಾದ್ಯಂತ ಅವಾಂತರ ಸೃಷ್ಟಿಸಿದ ಭಾರೀ ಮಳೆ; ಜುಲೈ 18ರವರೆಗೂ ಮುಂದುವರೆಯುವ ಸೂಚನೆ..

14 July, 2022 3:19 PM IST By: Kalmesh T

ರಾಜ್ಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಜು.18ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿರಿ: ಜುಲೈ 31ರೊಳಗೆ 'ಬೆಳೆ ವಿಮಾ ಸಪ್ತಾಹ' ನೋಂದಣಿ ಮಾಡಿಸಿ ಮತ್ತು ನೇರವಾಗಿ ಖಾತೆಗೆ ಹಣ ಪಡೆಯಿರಿ!

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರದ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

ಇನ್ನು ಆಗಾಗ ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಸಾಧಾರಣದಿಂದ ಭಾರೀ ಮಳೆ ಆಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಅದೇ ರೀತಿ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈತರಿಗೆ ಸುವರ್ಣಾವಕಾಶ: “ಕೃಷಿ ಪಂಡಿತ ಪ್ರಶಸ್ತಿ”ಗೆ ಅರ್ಜಿ ಆಹ್ವಾನ: ₹1,25,000 ಬಹುಮಾನ! ಜುಲೈ 20 ಕೊನೆ ದಿನ..

ಈ ರಾಜ್ಯಗಳಲ್ಲೂ ಸುರಿಯಲಿದೆ ವಿಪತ್ತು ಮಳೆ

ದೇಶದ ಹಲವು ರಾಜ್ಯಗಳಲ್ಲಿ ಆಕಾಶ ಅನಾಹುತದಿಂದ ಮಳೆಯಾಗುತ್ತಿದೆ. ಅತಿವೃಷ್ಟಿ ಎದುರಿಸುತ್ತಿರುವ ಗುಜರಾತ್, ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇದರೊಂದಿಗೆ ಉತ್ತರ ಗೋವಾ, ದಕ್ಷಿಣ ಗೋವಾಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಗುಡ್‌ನ್ಯೂಸ್‌: ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸುದ್ದಿ; 5 ಲಕ್ಷದವರೆಗೆ ಹೆಚ್ಚುವರಿ ಪರಿಹಾರ ಘೋಷಣೆ!

ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಈ ಮಳೆ ಹಲವು ರಾಜ್ಯಗಳಲ್ಲಿ ಬಿಸಿಲಿನ ತಾಪಕ್ಕೆ ಪರಿಹಾರ ನೀಡಿದ್ದರೆ, ಹಲವು ರಾಜ್ಯಗಳಲ್ಲಿ ಈ ಮಳೆ ಅನಾಹುತವಾಗಿ ಸುರಿಯುತ್ತಿದೆ. ಆದರೆ, ಬಹುತೇಕ ರೈತರು ಮುಂಗಾರು ಮಳೆಗಾಗಿ ಕಾದು ಕುಳಿತಿದ್ದು, ಖಾರಿಫ್ ಬೆಳೆಗಳನ್ನು ಬಿತ್ತನೆ ಮಾಡಬಹುದಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ತೆಲಂಗಾಣ, ಒಡಿಶಾ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.

ಮಹಾರಾಷ್ಟ್ರದಲ್ಲಿ ಪ್ರವಾಹದಂತಹ ಪರಿಸ್ಥಿತಿ , ರೆಡ್ ಅಲರ್ಟ್ ಘೋಷಿಸಲಾಗಿದೆ

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಈ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಹ ಮತ್ತು ಮಳೆ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 89 ಜನರು ಸಾವನ್ನಪ್ಪಿದ್ದಾರೆ.