News

ಇಂದಿನಿಂದ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್

26 September, 2020 9:21 AM IST By:

ಕಳೆದ ನಾಲ್ಕೈದು ದಿನಗಳಿಂದ ವಿರಾಮ ನೀಡಿದ್ದ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ಕೃಷಿಕರಿಗೆ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆ ಆಘಾತ ನೀಡಿದೆ. ನಿರಂತರವಾಗಿ ಮಳೆ ಸುರಿದರೆ ಬೆಳೆಗಳು ಹಾಳಾಗುವ ಸಾಧ್ಯತೆ ಹೆಚ್ಚಿದೆ. ಹವಾಮಾನ ಇಲಾಖೆಯು ಇನ್ನೆರಡು ದಿನ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ,ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಸೆ.26 ಮತ್ತು 27ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ,  ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು.

ಮಳೆ-ಎಲ್ಲಿ,ಎಷ್ಟು?: ಕಾರವಾರದಲ್ಲಿ ಗರಿಷ್ಠ 11 ಸೆಂ.ಮೀ ಮಳೆ ಯಾಗಿದೆ. ಭಟ್ಕಳ 4, ಕೊಲ್ಲೂರು 3, ಅಂಕೋಲಾ, ಬೀದರ್, ಆಗುಂಬೆ 2, ಧರ್ಮಸ್ಥಳ, ಪುತ್ತೂರು, ಕಾರ್ಕಳ, ಉಡುಪಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.