ಮುಂಬರುವ ಐದು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿರಿ: ನಿಯಮಗಳ ಉಲ್ಲಂಘನೆ; ಕರ್ನಾಟಕದಲ್ಲಿ Ola, Uber, Rapido ಆಟೋ ಸೇವೆ ಸ್ಥಗಿತಗೊಳಿಸುವಂತೆ ಸರ್ಕಾರಿ ಆದೇಶ!
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಇವತ್ತು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಜಾನುವಾರು ಮಾಲೀಕರಿಗೆ ಸಿಹಿಸುದ್ದಿ; ದೇಶದ ಎಲ್ಲಾ ಪಂಚಾಯತ್‌ಗಳಲ್ಲಿ ಸರ್ಕಾರ ಡೈರಿ ತೆರೆಯಲು ನಿರ್ಧಾರ!
ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ವರೆಗೆ ವಿಸ್ತರಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ ಜಿಲ್ಲೆಗಳು ಹೆಚ್ಚಿನ ಮಳೆಯನ್ನು ಕಾಣಲಿವೆ.
ಬೆಂಗಳೂರಿನಲ್ಲೂ ಜೋರು ಮಳೆ:
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿಯುತಿದ್ದು, ಅದು ಇಂದು ಕೂಡ ಮುಂದುವರಿದಿದೆ.
DA Hike: ಸರ್ಕಾರಿ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಸುದ್ದಿ! ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ!
ಇನ್ನುಳಿದಂತೆ ತುಮಕೂರು, ಬೆಂಗಳೂರು ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜಯನಗರ, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ವೃತ್ತ, ಲಾಲ್ಬಾಗ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.