ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ಎಂದು ನೋಡುವುದಾದರೆ, ಕರಾವಳಿಯ ಬಹುತೇಕ ಕಡೆಗಳಲ್ಲಿ;
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಇನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ (ಬೆಂಗಳೂರು ನಗರ ಜಿಲ್ಲೆ)ಲ್ಲಿ ಬರೋಬ್ಬರಿ 8 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಕಾರವಾರ, ಹೊಸಕೋಟೆ, ತಿಪಟೂರು, ಗೋಣೆಕೊಪ್ಪಲು ಕೆವಿಕೆಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನ್ನಾವರ, ಮಂಗಳೂರು, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಬೆಂಗಳೂರು ನಗರ, ಹುಣಸೂರು
ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ.
Ration Card ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ, ಮತ್ತೊಮ್ಮೆ ಕಾರ್ಡ್ ಅಪ್ಲೈ ಮಾಡುವುದೇಗೆ ?
ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ ?
ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ಬಿಜಾಪುರ, ಚಿಕ್ಕಮಗಳೂರು,
ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ
ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
Old pension ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್: ಹಳೆಪಿಂಚಣಿ ವ್ಯವಸ್ಥೆ ಜಾರಿಗೆ ಸಿದ್ದರಾಮಯ್ಯ ಭರವಸೆ!
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು 39.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಮಳೆ ಮುನ್ಸೂಚನೆ
ರಾಜ್ಯದ ಕರಾವಳಿಯ ಹಲವು ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ
ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಸಾಧ್ಯತೆ ಇದ್ದು, ಗಾಳಿಯ ವೇಗವು
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗಂಟೆಗೆ 40ರಿಂದ 50 ಕಿ.ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ
ಗಂಟೆಗೆ 30ರಿಂದ 40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಸಾಧ್ಯತೆ ಇದ್ದು,
ಗಾಳಿಯ ವೇಗವು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗಂಟೆಗೆ 40ರಿಂದ 50 ಕಿ.ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ
ಗಂಟೆಗೆ 30ರಿಂದ 40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ: ಗರಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ
3ರಿಂದ 4 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀ ನಿಂದ 55 ಕಿ.ಮೀ
ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ, ಈ ಸಂದರ್ಭದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ
ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ
ಬೆಂಗಳೂರು ನಗರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಕೆಲವೊಮ್ಮೆ ಬಲವಾದ ಮೇಲ್ಮೇ ಸುಳಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Buffalo Milk Price Hike: ರೈತರಿಗೆ ಸಿಹಿಸುದ್ದಿ: ಎಮ್ಮೆ ಹಾಲಿಗೆ 9.25 ರೂ. ನಿಗದಿ!