ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆ.11ರಂದು ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆ. 12 ರಂದು ಇದೇ ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆ. 11 ರಂದು ಗಾಳಿಯ ವೇಗ ಗಂಟೆಗೆ ಸುಮಾರು 50 ಕಿ.ಮೀ ಇರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ (Yellow alert) ಘೋಷಿಸಲಾಗಿದೆ.
ಐದು ದಿನಗಳಿಂದ ಕರಾವಳಿ ಹಾಗೂ ಒಳನಾಡಿನಾದ್ಯಂತ ಧಾರಾಕಾರ ಮಳೆ (Heavy rain) ಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಹೆಚ್ಚು ಮಳೆಯಾಗಬಹುದು. ಆ.13ರಿಂದ ಮಳೆ ಪ್ರಮಾಣ ತಗ್ಗುವ ಸಾಧ್ಯತೆ ಇದೆ ಎಂದರು.