News

ಬೆಂಗಳೂರಲ್ಲಿ ಭಾರೀ ಮಳೆ..ರಾಜ್ಯಕ್ಕೆ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು..?

21 June, 2023 9:29 AM IST By: Maltesh
Heavy Rain in bengaluru weather report

ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಷಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.  ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. 

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

21 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.  ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.  ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.