ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 6 ರಿಂದ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದರಿಂದ ಈ ಜಿಲ್ಲೆಗಳನ್ನು ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.7ರಿಂದ 9 ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಈ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಚದುರಿದ ಮಳೆಯಾಗಲಿದೆ. ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಲಿದೆ.